Utthana Kathaspardhe 2023: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ

Utthana Kathaspardhe 2023: ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು. ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು. ಕಥೆಗಳನ್ನು 2023ರ ಅಕ್ಟೋಬರ್‌ 10 ಒಳಗೆ ಕಳುಹಿಸಬೇಕು.

Written by - Puttaraj K Alur | Last Updated : Sep 6, 2023, 05:34 PM IST
  • ಉತ್ಥಾನ ಮಾಸಪತ್ರಿಕೆಯು 2023ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳನ್ನು ಆಹ್ವಾನಿಸಿದೆ
  • 2023ರ ಅಕ್ಟೋಬರ್ 10 ಕಥೆ ಕಳುಹಿಸಲು ಕೊನೆಯ ದಿನಾಂಕವಾಗಿದೆ
  • ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು ಮತ್ತು ಬೇರೆ ಎಲ್ಲೂ ಪ್ರಕಟವಾಗಿರಬಾರದು
Utthana Kathaspardhe 2023: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ   title=
ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2023

ಬೆಂಗಳೂರು: ಉದಯೋನ್ಮುಖ ಕಥೆಗಾರರಿಗೆ ಇಲ್ಲಿದೆ ಗುಡ್ ನ್ಯೂಸ್. ಪ್ರತಿ ವರ್ಷದಂತೆ ಈ ವರ್ಷವೂ ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ ಆಯೋಜಿಸಿದೆ. ಕಳೆದ 5 ದಶಕಗಳಿಂದಲೂ ಉತ್ಥಾನ ಮಾಸಪತ್ರಿಕೆ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ ಆಯೋಜಿಸುತ್ತಾ ಬಂದಿದೆ. ಅದರಂತೆ 2023ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಗಳನ್ನು ಆಹ್ವಾನಿಸಿದೆ. ಈ ಕಥಾ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕು. ಆ ನಿಯಮಗಳು ಹೀಗಿವೆ.

ಸ್ಪರ್ಧೆಗೆ ಕಳುಹಿಸುವ ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಬಾರದು, ಎಲ್ಲೂ ಸ್ವೀಕೃತವಾಗಿರಬಾರದು. ಪರಿಶೀಲನೆಗಾಗಿಯೂ ಯಾವುದೇ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಕಟವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಬಹುಮಾನಿತ ಕಥೆ ‘ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ. ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು. ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು. ಕಥೆಗಳನ್ನು 2023ರ ಅಕ್ಟೋಬರ್‌ 10 ಒಳಗೆ ಕಳುಹಿಸಬೇಕು.

ಇದನ್ನೂ ಓದಿ: 14 ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ

ಕಥಾ ಸ್ಪರ್ಧೆಯ ಬಹುಮಾನಗಳು

ಆಯ್ಕೆಯಾದ ಮೊದಲನೆಯ ಬಹುಮಾನಕ್ಕೆ 15 ಸಾವಿರ ರೂ, 2ನೇಯ ಬಹುಮಾನ 12 ಸಾವಿರ ರೂ., 3ನೇಯ ಬಹುಮಾನ 10 ಸಾವಿರ ರೂ. ನಿಗದಿ ಮಾಡಲಾಗಿದೆ. ಇದಲ್ಲದೆ 5 ಮೆಚ್ಚುಗೆ ಪಡೆದ ಕಥೆಗಳಿಗೆ ತಲಾ 2 ಸಾವಿರ ರೂ. ಬಹುಮಾನ ನೀಡಲಾಗುವುದು. ಸ್ಪರ್ಧೆಗೆ ಸಂಬಂಧಿಸಿದ ಎಲ್ಲಾ ವಿಚಾರಗಳಲ್ಲಿಯೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ. ತೀರ್ಪುಗಾರರ ಮೌಲ್ಯ ನಿರ್ಣಯದ ನಂತರ ಫಲಿತಾಂಶವನ್ನು ‘ಉತ್ಥಾನ’ದಲ್ಲಿ ಪ್ರಕಟಿಸಲಾಗುವುದು. ವಿಜೇತರಿಗೆ ಮಾತ್ರ ಪತ್ರ ಬರೆದು ತಿಳಿಸಲಾಗುವುದು. ಅದಕ್ಕೆ ಪೂರ್ವದಲ್ಲಿ ಯಾವುದೇ ಪತ್ರ ವ್ಯವಹಾರ ಸಾಧ್ಯವಾಗದು ಎಂದು ಉತ್ಥಾನ ಮಾಸ ಪತ್ರಿಕೆ ಸಂಪಾದಕ ಅನಿಲ್ ಕುಮಾರ್ ಮೊಳಹಳ್ಳಿ ತಿಳಿಸಿದ್ದಾರೆ.

ಕಥೆಯನ್ನು ಪೋಸ್ಟ್ ಮೂಲಕ ಅಥವಾ ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕವೂ ಕಳುಹಿಸಬಹುದು. ಕಥೆ ಕಳುಹಿಸಬೇಕಾದ ಇ-ಮೇಲ್ ವಿಳಾಸ: utthanakathaspardhe@gmail.com 

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು: ರಾಜಧಾನಿ ಬೆಂಗಳೂರಿಗೆ ಜಲಕಂಟಕ..!?

ಕಥೆ ಕಳಿಸಬೇಕಾದ ಅಂಚೆ ವಿಳಾಸ: ಸಂಪಾದಕರು, ‘ಉತ್ಥಾನ’ ವಾರ್ಷಿಕ ಕಥಾ ಸ್ಪರ್ಧೆ – 2023, ‘ಕೇಶವ ಶಿಲ್ಪ’, ಕೆಂಪೇಗೌಡನಗರ, ಬೆಂಗಳೂರು-04 ದೂರವಾಣಿ: 77954 41894.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News