ಅಧಿಕಾರಕ್ಕೆ ಬರುವ ಭ್ರಮೆಯಲ್ಲಿರುವ ಸಿದ್ದರಾಮಯ್ಯ: ಸಚಿವ ವಿ.ಸುನೀಲ್ ಕುಮಾರ್

ರಾಜ್ಯದ ಜನರಿಗೆ ಓಬವ್ವ ಜಯಂತಿ ಮಾಡುವ ಬಸವರಾಜ್ ಬೊಮ್ಮಾಯಿ ಬೇಕೋ? ಅಥವಾ ಟಿಪ್ಪು ಜಯಂತಿ ಮಾಡುವ ಸಿದ್ದರಾಮಯ್ಯ ಬೇಕೋ? ಅಂತಾ ವಿ.ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Dec 28, 2021, 06:37 PM IST
  • ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆಗೆ ಸಚಿವ ವಿ.ಸುನೀಲ್ ಕುಮಾರ್ ತಿರುಗೇಟು
  • ಜನರಿಗೆ ಓಬವ್ವ ಜಯಂತಿ ಮಾಡುವ ಬಸವರಾಜ್ ಬೊಮ್ಮಾಯಿ ಬೇಕೋ? ಟಿಪ್ಪು ಜಯಂತಿ ಮಾಡುವ ಸಿದ್ದರಾಮಯ್ಯ ಬೇಕೋ?
  • ರಾಜ್ಯಕ್ಕೆ ಕೆಟ್ಟ ಸಂದೇಶ ನೀಡುತ್ತಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೆ ಜನರು ತಕ್ಕಪಾಠ ಕಲಿಸಲಿದ್ದಾರೆ
ಅಧಿಕಾರಕ್ಕೆ ಬರುವ ಭ್ರಮೆಯಲ್ಲಿರುವ ಸಿದ್ದರಾಮಯ್ಯ: ಸಚಿವ ವಿ.ಸುನೀಲ್ ಕುಮಾರ್  title=
ಸಿದ್ದರಾಮಯ್ಯಗೆ ವಿ.ಸುನೀಲ್ ಕುಮಾರ್ ತಿರುಗೇಟು

ಚಿತ್ರದುರ್ಗ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್(V Sunil kumar) ಹೇಳಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಮತಾಂತರ ನಿಷೇಧ ಕಾಯ್ದೆ(Anti Conversion Bill 2021)ಯನ್ನು ರದ್ದು ಮಾಡುತ್ತೇವೆಂಬ ಸಿದ್ದರಾಮಯ್ಯರ ಹೇಳಿಕೆಗೆ ಅವರು ತಿರುಗೇಟು ನೀಡಿದ್ದಾರೆ.

‘ಸಿದ್ದರಾಮಯ್ಯ(Siddaramaiah)ನವರು ಕಾಂಗ್ರೆಸ್ ಸರ್ಕಾರ ಬರುವ ಭ್ರಮೆಯಲ್ಲಿದ್ದಾರೆ. ಹೀಗಾಗಿ ಅವರು ನಮ್ಮ ಸರ್ಕಾರ ಬಂದರೆ ಮತಾಂತರ ನಿಷೇಧ ಕಾಯ್ದೆ ವಾಪಸ್ ತೆಗೆದುಕೊಳ್ಳುತ್ತೇವೆ, ಗೋಹತ್ಯೆ ಕಾನೂನು ನಿಷೇಧ ಮಾಡುತ್ತೇವೆ ಮತ್ತು ಟಿಪ್ಪು ಜಯಂತಿಯನ್ನು ಮತ್ತೆ ಮಾಡುತ್ತೇವೆ ಅಂತಾರೆ. ಈ ರೀತಿಯಲ್ಲಿ ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನವರು ಈ ರಾಜ್ಯಕ್ಕೆ ಯಾವ ಸಂದೇಶವನ್ನು ನೀಡುತ್ತಿದ್ದಾರೆ? ರಾಜ್ಯದ ಜನರು ಇದನ್ನು ಗಂಭೀರವಾಗಿ ಗಮನಿಸುತ್ತಿದ್ದಾರೆ. ಅವರಿಗೆ ತಕ್ಕಪಾಠ ಕಲಿಸುತ್ತಾರೆ’ ಅಂತಾ ಕುಟುಕಿದ್ದಾರೆ.

ಇದನ್ನೂ ಓದಿ: ಸೋನಿಯಾ & ರಾಹುಲ್ ಗಾಂಧಿ ನಾಯಕತ್ವದಲ್ಲಿ ನವಭಾರತ ನಿರ್ಮಾಣಕ್ಕೆ ಕೈಜೋಡಿಸಿ: ಸಿದ್ದರಾಮಯ್ಯ

‘ರಾಜ್ಯದ ಜನರಿಗೆ ಓಬವ್ವ ಜಯಂತಿ ಮಾಡುವ ಬಸವರಾಜ್ ಬೊಮ್ಮಾಯಿ(Basavaraj Bommai) ಬೇಕೋ?ಅಥವಾ ಟಿಪ್ಪು ಜಯಂತಿಯನ್ನು ಮಾಡುವ ಸಿದ್ದರಾಮಯ್ಯ ಬೇಕೋ? ಇದನ್ನು ರಾಜ್ಯದ ಜನ ತೀರ್ಮಾನ ಮಾಡಬೇಕು. ಆಸೆ ಆಮಿಷ ಒಡ್ಡಿ ಮತಾಂತರ ಮಾಡಬಾರದೆಂದು ಕಾನೂನಿನಲ್ಲಿದೆ. ಬಲತ್ಕಾರದಿಂದ ಆಸೆ-ಆಮಿಷಗಳಿಗೆ ಮತಾಂತರ ಆಗಬಾರದು. ತಪ್ಪೇನಿದೆ ಇದರಲ್ಲಿ, ಮತಾಂತರ ಆಗುವರು ಜಿಲ್ಲಾಧಿಕಾರಿಗಳಿಗೆ ಅರ್ಜಿ ಕೊಡಲಿ. ಇದ್ಯಾವುದನ್ನು ಅರ್ಥಮಾಡಿಕೊಳ್ಳದ ಸಿದ್ದರಾಮಯ್ಯನವರು ರಾಜ್ಯಕ್ಕೆ ಒಂದು ಕೆಟ್ಟ ಸಂದೇಶ ಕೊಡುತ್ತಿದ್ದಾರೆ. ಅವರ ಬೆದರಿಕೆಯಿಂದ ಸರ್ಕಾರ ನಿಲುವು ಬದಲಿಸುವುದಿಲ್ಲವೆಂದು’ ಸ್ಪಷ್ಟಪಡಿಸಿದ್ದಾರೆ.

‘ಜನಮಾನಸದಲ್ಲಿ ದೊಡ್ಡಪ್ರಮಾಣದಲ್ಲಿರುವ ಅಭಿಪ್ರಾಯಗಳನ್ನು ಆಧರಿಸಿ ಸರ್ಕಾರ ಕಾಯ್ದೆಗಳನ್ನು ರೂಪಿಸುತ್ತಿದೆ. ಚುನಾವಣೆ ಪೂರ್ವದಲ್ಲಿ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸವನ್ನು ಬಿಜೆಪಿ(BJP) ಮಾಡುತ್ತಿದೆ. ಸಿದ್ದರಾಮಯ್ಯನವರು ಆಡುತ್ತಿರುವ ಮಾತುಗಳನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಹೀಗಾಗಿ ಏನೇ ಮಾತನಾಡಬೇಕಾದರೂ ಅವರು ಎಚ್ಚರಿಕೆಯಿಂದ ಮಾತನಾಡಲಿ’ ಅಂತಾ ಸುನೀಲ್ ಕುಮಾರ್ ಹೇಳಿದ್ದಾರೆ.  

ಇದನ್ನೂ ಓದಿ: DK Shivakumar: ಡಿ.ಕೆ.ಶಿವಕುಮಾರ್ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗೆ ಶಾಕ್..! 

ಸಿಎಂ ಬದಲಾವಣೆ ಕೇವಲ ಊಹಾಪೋಹ!

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಸಚಿವ ವಿ.ಸುನೀಲ್ ಕುಮಾರ್(V Sunil kumar) ಇದು ಕೇವಲ ಊಹಾಪೋಹವೆಂದು ಹೇಳಿದರು. ಸಿಎಂ ಬದಲಾವಣೆ ವಿಚಾರವಾಗಿ ಹಬ್ಬಿರುವ ಸುದ್ದಿಗಳೆಲ್ಲ ಕೇವಲ ಊಹಾಪೋಹ. ದಾವಣಗೆರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ಆರುಣ್ ಸಿಂಗ್ ಕೂಡ ಸ್ಪಷ್ಟಪಡಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯು ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತದೆ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News