ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಭಜರಂಗದಳದ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೋಮುಗಲಭೆ ನಿಯಂತ್ರಣದ ಹೆಸರಲ್ಲಿ ಹಿಂದೂಗಳು ಹಾಗೂ ಹಿಂದೂ ಸಂಘಟನೆಗಳು ಗುರಿಯಾಗಿಸಿ ದ್ವೇಷದ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ’ ಎಂದು ಕಿಡಿಕಾರಿದ್ದಾರೆ.
‘ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮು ಗಲಭೆ ನಿಯಂತ್ರಣದ ಹೆಸರಿನಲ್ಲಿ ಹಿಂದುಗಳು ಹಾಗೂ ಹಿಂದು ಸಂಘಟನೆಗಳನ್ನು ಗುರಿಯಾಗಿಸಿ ದ್ವೇಷದ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಇವರಿಗೆ ಮಂಗಳೂರು ಪೊಲೀಸರು ಗಡಿಪಾರು ನೋಟಿಸ್ ನೀಡಿದ್ದಾರೆಂಬ ಮಾಹಿತಿ ಲಭಿಸಿದ್ದು, ಇದು ದ್ವೇಷ ರಾಜಕಾರಣದ ಪರಮಾವಧಿಯಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನಗಳ ಶಾಂತಿ ನೆಲೆಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಧರ್ಮ- ಧರ್ಮಗಳ ಮಧ್ಯೆ ದ್ವೇಷ ಹಚ್ಚಲು ಮುಂದಾಗಿದೆ’ ಎಂದು ಕುಟುಕಿದ್ದಾರೆ.
ಇದು ದ್ವೇಷ ರಾಜಕಾರಣದ ಪರಮಾವಧಿಯಾಗಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಷ್ಟು ದಿನಗಳ ಶಾಂತಿ ನೆಲೆಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಧರ್ಮ- ಧರ್ಮಗಳ ಮಧ್ಯೆ ದ್ವೇಷ ಹಚ್ಚಲು ಮುಂದಾಗಿದೆ. (2/5)— Sunil Kumar Karkala (@karkalasunil) July 21, 2023
ಇದನ್ನೂ ಓದಿ: ದಲಿತರನ್ನು ಬಿಜೆಪಿ ಏಕಿಷ್ಟು ಕೇವಲವಾಗಿ ಕಾಣುತ್ತಿದೆ?: ಕಾಂಗ್ರೆಸ್
‘ಮಂಗಳೂರಿನಲ್ಲಿ ಕೋಮು ದ್ವೇಷ ನಿಯಂತ್ರಣ ಘಟಕ ಸ್ಥಾಪನೆ ಮಾಡಿರುವುದೇ ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಕೂಡಿದ್ದು, ಇದರ ವಿರುದ್ಧ ನಾವು ಕಾನೂನು ರೀತ್ಯ ಹೋರಾಟ ನಡೆಸುತ್ತೇವೆ. ಈ ಮೂವರಿಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬ ಬಗ್ಗೆ ಪೊಲೀಸ್ ಆಯುಕ್ತರು ಇದುವರೆಗೆ ಉತ್ತರ ನೀಡಿಲ್ಲ’ ಅಂತಾ ಟ್ವೀಟ್ ಮಾಡಿದ್ದಾರೆ.
ಸಿಎಂ @siddaramaiah ನವರ ಕಣ್ಸನ್ನೆಗೆ ತಕ್ಕಂತೆ ಸ್ಪೀಕರ್ @utkhader ಮಾತ್ರ ಕುಣಿಯುತ್ತಿದ್ದಾರೆ ಎಂದು ನಾವು ಭಾವಿಸಿದ್ದೆವು. ಆದರೆ ಇಡಿ ಪೊಲೀಸ್ ಇಲಾಖೆಯನ್ನು ತಮ್ಮ ಮತ ಬ್ಯಾಂಕ್ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. @siddaramaiah ಯನವರ ಬೆಂಬಲದಿಂದ ಈ ಹಿಂದೆ ಪಿಎಫ್ಐ ಉಗ್ರರು ಹಿಂದು ಕಾರ್ಯಕರ್ತರ ಬರ್ಭರ ಹತ್ಯೆ (4/5).
— Sunil Kumar Karkala (@karkalasunil) July 21, 2023
‘ಸಿಎಂ ಸಿದ್ದರಾಮಯ್ಯನವರ ಕಣ್ಸನ್ನೆಗೆ ತಕ್ಕಂತೆ ಸ್ಪೀಕರ್ ಯುಟಿ ಖಾದರ್ ಮಾತ್ರ ಕುಣಿಯುತ್ತಿದ್ದಾರೆಂದು ನಾವು ಭಾವಿಸಿದ್ದೆವು. ಆದರೆ ಇಡಿ ಪೊಲೀಸ್ ಇಲಾಖೆಯನ್ನು ತಮ್ಮ ಮತಬ್ಯಾಂಕ್ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯನವರ ಬೆಂಬಲದಿಂದ ಈ ಹಿಂದೆ ಪಿಎಫ್ಐ ಉಗ್ರರು ಹಿಂದೂ ಕಾರ್ಯಕರ್ತರ ಬರ್ಭರ ಹತ್ಯ ಮಾಡಿರುವುದು ನಮ್ಮ ಕಣ್ಣ ಮುಂದೆ ಇದೆ. ಹಿಂದಿನ ಘಟನೆಯನ್ನು ಸಿದ್ದರಾಮಯ್ಯ ಸರ್ಕಾರ ಮತ್ತೆ ಪುನರಾವರ್ತನೆ ಮಾಡಲು ಹೊರಟಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಹೋರಾಟ ರೂಪಿಸುತ್ತೇವೆ’ ಎಂದು ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳ ಜಾರಿಗೆ ಎಸ್ಸಿಪಿ, ಟಿಎಸ್ಪಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.