ಶೀಘ್ರದಲ್ಲೇ ಖಾಲಿ ಇರುವ ಪೊಲೀಸ್ ಹುದ್ದೆಗಳ ಭರ್ತಿ-ಸಿಎಂ ಭರವಸೆ
ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಂಗಳೂರು: ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು.
ಇದನ್ನೂ ಓದಿ: Daily GK Quiz: ಭಾರತದಲ್ಲಿ ಪ್ರಥಮವಾಗಿ ನಿರ್ಮಾಣಗೊಂಡ ಅಣುಶಕ್ತಿ ಸ್ಥಾವರದ ಹೆಸರೇನು?
ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು.
ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವಿಫಲರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ DCP ಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು.
ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು.
ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಇದನ್ನು ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡಬೇಕು ಎಂದು ಆಗ್ರಹಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.