ಬೆಂಗಳೂರು : ವಾಲ್ಮೀಕಿನಿಗಮ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದಿದೆ. ನಿನ್ನೆ ನಾಗೇಂದ್ರ ನಿವಾಸದ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಿನವಿಡೀ ತನಿಖೆ ನಡೆದಿದ್ದರು. ಇದೀಗ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದಿರುವ ಇಡಿ ಅಧಿಕಾರಿಗಳು  ಅವರನ್ನು ಇಡಿ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. 


COMMERCIAL BREAK
SCROLL TO CONTINUE READING

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ತಂಡ  ಕಳೆದ ಎರಡು ದಿನಗಳಿಂದ ನಾಗೇಂದ್ರ ನಿವಾಸದಲ್ಲಿ ತಪಾಸಣೆ ನಡೆಸಿತ್ತು.ಇಲಾಖೆಯ ಅಧಿಕಾರಿಗಳ ತಂಡ ಮೊನ್ನೆ ಬೆಳ್ಳಂಬೆಳಗ್ಗೆಯೇ  ಮಾಜಿ ಸಚಿವರ ನಿವಾಸಕ್ಕೆ ದಾಳಿ ನಡೆಸಿತ್ತು.ಮಾಜಿ ಸಚಿವರ ಆಪ್ತ ಸಹಾಯಕರು, ಮಾಧ್ಯಮ ಸಲಹೆಗಾರ,ಆಪ್ತರು ಹೀಗೆ ಯಾರನ್ನೂ ಬಿಡದೆ ಅಧಿಕಾರಿಗಳು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು.ಇವರೆಲ್ಲರನ್ನೂ ಶಾಸಕರ ಕಚೇರಿ ನಿವಾಸಕ್ಕೆ ಕರೆತಂದು ವಿಚಾರಣೆ ನಡೆಸಿದ್ದರು. 


ಇದನ್ನೂ ಓದಿ : ಉದ್ಯೋಗ ಸಂದರ್ಶನಕ್ಕಾಗಿ ಮುಗಿಬಿದ್ದ ನಿರುದ್ಯೋಗಿಗಳು : ಗುಜರಾತ್‌ನ ಭರೂಚ್‌ನಲ್ಲಿ ಘಟನೆ


ಏನಿದು ಪ್ರಕರಣ : 
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ಬಗ್ಗೆ ನಿಗಮದ ಅಧ್ಯಕ್ಷರ ಗಮನಕ್ಕೂ ತಂದಿರಲಿಲ್ಲ ಎನ್ನಲಾಗಿದೆ. ಈ ಬೃಹತ್ ಮೊತ್ತವನ್ನು  ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. 


ಈ ವಿಚಾರಾ ತಮ್ಮ ಗಮನಕ್ಕೆ ಬರುತ್ತಿದ್ದಂತೆ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ  ಆತ್ಮಹತ್ಯೆಗೆ ಶರಣಾಗಿದ್ದರು.ಈ ಬಗ್ಗೆ ಎಲ್ಲಾ ಮಾಹಿತಿಯನ್ನು ಬರೆದಿಟ್ಟು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು.   ನಂತರ ಈ ಅಕ್ರಮ ನಿಧಾನವಾಗಿ ಹೊರ ಬಂದಿದೆ. ಚಂದ್ರಶೇಖರನ್ ಆತ್ಮಹತ್ಯೆಗೂ ಮೊದಲು ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಅದರಲ್ಲಿಅವರು ನಿಗಮದ ಅಧಿಕಾರಿಗಳ  ಬಗ್ಗೆಯೂ ಉಲ್ಲೇಖ ಮಾಡಿದ್ದರು. 


ಇದನ್ನೂ ಓದಿ :  ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಿಲ್ಲ : ಡಿಸಿಎಂ ಡಿಕೆಶಿ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.