ನಾಗೇಂದ್ರ, ಬಸವನಗೌಡ ದದ್ದಲ್‌ಗೆ ಇಡಿ ಶಾಕ್: ಹರೀಶ್ ಬಾಯಿಬಿಟ್ಟರೆ ಬಂಧನ ಫಿಕ್ಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ಮಾಜಿ ಸಚಿವ ನಾಗೇಂದ್ರ, ಶಾಸಕ ಹಾಗೂ ನಿಗಮ ಅಧ್ಯಕ್ಷ ಬಸವನಗೌಡ ದದ್ದಲ್ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ... ನೋಡಿ..

Written by - Krishna N K | Last Updated : Jul 10, 2024, 06:36 PM IST
    • ಮಾಜಿ ಸಚಿವ ನಾಗೇಂದ್ರಗೆ ಬಿಗಿಯಾಗಲಿದೆಯಾ ಕಾನೂನಿನ ಕುಣಿಕೆ..!?
    • ದದ್ದಲ್ ಗೂ ಕಾದಿದಿಯಾ ಇಡಿ ಕಂಟಕ..!?
    • ಹರೀಶ್ ಗೆ ಇಡಿ ಕಚೇರಿಯಲ್ಲಿ ಅಧಿಕಾರಿಗಳಿಂದ ಡ್ರಿಲ್
ನಾಗೇಂದ್ರ, ಬಸವನಗೌಡ ದದ್ದಲ್‌ಗೆ ಇಡಿ ಶಾಕ್: ಹರೀಶ್ ಬಾಯಿಬಿಟ್ಟರೆ ಬಂಧನ ಫಿಕ್ಸ್ title=
b nagendra

ಬೆಂಗಳೂರು : ಮಹರ್ಷಿ ವಾಲ್ಮೀಕಿ‌ ನಿಗಮದ ಹಗರಣ ಈಗ ಮತ್ತಷ್ಟು ಸದ್ದು ಮಾಡ್ತಿದೆ. ಮಾಜಿ ಮಂತ್ರಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಗರಣದಲ್ಲಿ  ಹಣವನ್ನು ಪಡೆದಿದ್ದ ಎಂಬ ಆರೋಪದ ಮೇಲೆ ನಾಗೇಂದ್ರ ಪಿಎ ಹರೀಶನನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಫುಲ್ ವಿಚಾರಣೆ ನಡೆಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ಮಾಜಿ ಸಚಿವ ನಾಗೇಂದ್ರ, ಶಾಸಕ ಹಾಗೂ ನಿಗಮ ಅಧ್ಯಕ್ಷ ಬಸವನಗೌಡ ದದ್ದಲ್ ಮನೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ರಾಮ್ಕ್ವ್ ಅಪಾರ್ಟ್ಮೆಂಟ್ ನ ನಾಗೇಂದ್ರ ಮನೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸ ಸೇರಿದಂತೆ ನಗರದ ಯಲಹಂಕ, ಕೋರಮಂಗಲ, ಬಳ್ಳಾರಿ, ಹಾಗೂ ರಾಯಚೂರು ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನೆಲೆ ಈ ದಾಳಿ ನಡೆದಿದ್ದು, ದಾಖಲೆಗಳು, ಕಂಪ್ಯೂಟರ್ ಸೇರಿ ಇತರೆ ವಸ್ತುಗಳನ್ನು ಸೀಜ್ ಮಾಡಿದ್ದಾರೆ.

ಇದನ್ನೂ ಓದಿ:ಅಂಗೈನಲ್ಲೇ ಪೊಲೀಸ್ ರಕ್ಷಕ : ಆ್ಯಪ್ ಮೂಲಕ ಪೊಲೀಸ್ ಸೇವೆ, ಇದು ದೇಶದಲ್ಲೇ ಮೊದಲು

ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸವನಗೌಡ ದದ್ದಲ್‌ಗೆ ಸೇರಿದ ಬೆಂಗಳೂರು, ಬಳ್ಳಾರಿ ಹಾಗೂ ರಾಯಚೂರಿನಲ್ಲಿರುವ ಮನೆಗಳು ಹಾಗೂ ಕಚೇರಿಗಳು ಸೇರಿ 15 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ರು. ಈ ವೇಳೆ ನಾಗೇಂದ್ರ ಪಿಎ ಹರೀಶ್ ಬಂಧಿಸಿ ಶಾಂತಿನಗರದಲ್ಲಿರುವ ಇ.ಡಿ.ಕಚೇರಿಗೆ ಅಧಿಕಾರಿಗಳು ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ನಿಗಮದ ಮಾಜಿ ವ್ಯವಸ್ಥಾಪಕ ಹಾಗೂ ಎಸ್ಐಟಿ ಬಂಧನದಲ್ಲಿರುವ ಪದ್ಮನಾಭ್ ಆರೋಪಿ ಸತ್ಯನಾರಾಯಣ ವರ್ಮಾನಿಂದ ಹಣ ಪಡೆದು ಹರೀಶ್ ಗೆ ಸುಮಾರು 25 ಲಕ್ಷ ನೀಡಿದ್ದ ಎನ್ನಲಾಗಿದೆ.‌ ಅಲ್ಲದೆ‌ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಪಿಎಗೂ ಹಣ ಕಳುಹಿಸಿದ್ದ ಎಂದು ತಿಳಿದುಬಂದಿದೆ. ಸದ್ಯ ಹರೀಶ್ ನನ್ನ ವಶಕ್ಕೆ ಪಡೆದುಕೊಂಡಿದ್ದು ಅಧಿಕಾರಿಗಳು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಕಾನೂನು ಕುಣಿಕೆ ಬಿಗಿಯಾಗಲಿದ್ದು  ಇ.ಡಿ.ಅಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ನಿನ್ನೆಯಷ್ಟೇ ಎಸ್ಐಟಿ ಅಧಿಕಾರಿಗಳು ವಿಚಾರಣೆ ಒಳಗಾಗಿದ್ದ ನಾಗೇಂದ್ರ, ಇಂದು ವಿಚಾರಣೆ ಹಾಜರಾಗುವಂತೆ ಎಸ್ಐಟಿ ಸೂಚಿಸಿತ್ತು.  ಇದರ ಬೆನ್ನಲೇ‌ ಬೆಳ್ಳಂಬೆಳ್ಳಗೆ ಬೆಂಗಳೂರಿನ ಡಾರ್ಲಸ್ ಕಾಲೋನಿಯಲ್ಲಿರುವ ನಿವಾಸ ಹಾಗೂ ಬಳ್ಳಾರಿ ಗ್ರಾಮಾಂತರದಲ್ಲಿರುವ ಮನೆ ಸೇರಿದಂತೆ ಹಲವಡೆ ಇ.ಡಿ.ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ:ಗುಡ್‌ ನ್ಯೂಸ್‌..! 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆ.ಪಿ.ಎಸ್.ಸಿಗೆ ಪ್ರಸ್ತಾವನೆ

94.73 ಕೋಟಿ ರೂ.ಅವ್ಯವಹಾರ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ‌ ದಾಖಲಾದ ಪ್ರಕರಣ ಆಧರಿಸಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಹಣ ದುರ್ಬಳಕೆ ಆರೋಪ ಸಂಬಂಧ ಸಿಬಿಐಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಪರ್ಯಾಯವಾಗಿ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ತನಿಖೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಹಾಗೂ ಹವಾಲಾ ದಂಧೆ ಹಾಗೂ ವ್ಯಾಪಕವಾಗಿ ಭ್ರಷ್ಟಾಚಾರವೆಸಗಿರುವುದು ಕಂಡುಬಂದಿತ್ತು. 

ಇನ್ನೂ ಇ.ಡಿ.ವಶದಲ್ಲಿರುವ ಹರೀಶ್, ಮಾಜಿ ಸಚಿವರ ಪರವಾಗಿ ಹಣದ ವಹಿವಾಟಿನಲ್ಲಿ ತೊಡಗಿಕೊಂಡ ಆರೋಪ ಕೇಳಿ ಬಂದಿದ್ದು, ಇದನ್ನು ಹರೀಶ್ ಒಪ್ಪಿಕೊಂಡರೆ ನಾಗೇಂದ್ರ ಬಂಧನ ಫಿಕ್ಸ್ ಎನ್ನಲಾಗುತ್ತಿದೆ. ಸತ್ಯನಾರಾಯಣ್ ವರ್ಮಾನಿಂದ ಕೋಟ್ಯಂತರ ರೂಪಾಯಿ ಪಡೆದ ಆರೋಪ‌ ಹರೀಶನ ಮೇಲಿದೆ. ಅಲ್ಲದೆ ಸಚಿವರ ಪರವಾಗಿ ಹವಾಲಾ ಹಣ ಹಾಗೂ ಚಿನ್ನದ ಬಿಸ್ಕಟ್ ಪಡೆದಿದ್ದ ಎನ್ನಲಾಗಿದ್ದು ಈ ಮೂಲಕ ಪರೋಕ್ಷವಾಗಿ ನಾಗೇಂದ್ರ  ಕೋಟ್ಯಂತರ ರೂಪಾಯಿ ಹಣ ಪಡೆದುಕೊಂಡಿರುವ ಗುಮಾನಿ ಹಿನ್ನೆಲೆ ಅಧಿಕಾರಿಗಳು ಅವರ ಮನೆಯಲ್ಲಿ ಶೋಧ ನಡೆಸಿದ್ದಾರೆ. 

ಇದನ್ನೂ ಓದಿ:

ಅಲ್ಲದೆ‌ ನಾಗೇಂದ್ರ ಬಳಸುತ್ತಿದ್ದ ಬ್ಯಾಂಕ್ ಖಾತೆಗಳ‌ ಹಣದ ವಹಿವಾಟಿನ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಪಿಎ ಪಂಪಣ್ಣ ಸಹ  55 ಲಕ್ಷ ಹಣ ಪಡೆದಿರುವ ಆರೋಪ ಕೇಳಿ ಬಂದಿದ್ದು, ದದ್ದಲ್ ಗೂ ಸಹ ಇಡಿ ಶಾಕ್ ಕೊಡುವ ಸಾಧ್ಯತೆ ಇದೆ.  ಒಟ್ಟಿನಲ್ಲಿ ಇಷ್ಟು ದಿನ ನನಗೂ ಹಗರಣಕ್ಕೂ ಯಾವುದೇ ಸಂಬಂಧ ಇಲ್ಲಾ ಎನ್ನುತ್ತಿದ್ದ ನಾಗೇಂದ್ರ ಹಾಗೂ ದದ್ದಲ್ ಬುಡಕ್ಕೆ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಬಂದಿರುವುದಂತೂ ಸುಳ್ಳಲ್ಲ. ಮುಂದೆ ಈ ಕೇಸ್ ಯಾವ ಹಂತಕ್ಕೆ ಬಂದು ನಿಲ್ಲುತ್ತೆ ಎಂಬುದನ್ನು ಸಹ ಕಾದು ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News