Valmiki Seer: ಸತ್ತರೇ ಇಲ್ಲೇ ಸಾಯ್ತೇನೆ ಎಂದು ಸಿಎಂ ಮುಂದೆಯೇ ಹೇಳಿದ ವಾಲ್ಮೀಕಿ ಶ್ರೀ..!

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಮ್ಮುಖದಲ್ಲೇ 'ನಾನು ಸತ್ತರೇ ಇಲ್ಲೇ ಸಾಯುತ್ತೇನೆ' ಎಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Last Updated : Feb 9, 2021, 03:47 PM IST
  • ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಮ್ಮುಖದಲ್ಲೇ 'ನಾನು ಸತ್ತರೇ ಇಲ್ಲೇ ಸಾಯುತ್ತೇನೆ' ಎಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
  • ನೀವು ಆ ನಿರ್ಧಾರ ಮಾಡಬೇಡಿ ಎಂದು ಸಿಎಂ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
  • ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದ ವೇಳೆ ಮಾತನಾಡಿದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ
Valmiki Seer: ಸತ್ತರೇ ಇಲ್ಲೇ ಸಾಯ್ತೇನೆ ಎಂದು ಸಿಎಂ ಮುಂದೆಯೇ ಹೇಳಿದ ವಾಲ್ಮೀಕಿ ಶ್ರೀ..! title=

ಹರಿಹರ: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಮ್ಮುಖದಲ್ಲೇ 'ನಾನು ಸತ್ತರೇ ಇಲ್ಲೇ ಸಾಯುತ್ತೇನೆ' ಎಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದ ಘಟನೆ ಇಂದು ನಡೆಯಿತು. ಅದಕ್ಕೆ ನೀವು ಆ ನಿರ್ಧಾರ ಮಾಡಬೇಡಿ ಎಂದು ಸಿಎಂ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದ ವೇಳೆ ಮಾತನಾಡಿದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ(Valmiki Seer) ವಾಲ್ಮೀಕಿ ಸಮುದಾಯಕ್ಕೆ ಮೀಸಲು ಹೆಚ್ಚಿಸಲು ಮಾರ್ಚ್‌ 9ರ ಗಡುವು ನೀಡಿದರು. ಅದಲ್ಲದೇ ಬೇಡಿಕೆ ಈಡೇರಿಸದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದರು.

Siddaramaiah: ಬಾಲ್ಯದಲ್ಲಿ ಸಿದ್ದರಾಮಯ್ಯ '₹ 5' ಗೆ ಕುರಿ ಖರೀದಿಸಿ, ಎಷ್ಟು ಲಾಭ ಗಳಿಸಿದ್ರು ಗೊತ್ತಾ?

ಬಳಿಕ ಮಾತು ಮುಂದುವರೆಸಿದ ಶ್ರೀಗಳು ನಾನು ಸತ್ತರೇ ಇಲ್ಲೇ ಸಾಯುತ್ತೇನೆ ಎಂದು ಹೇಳಿದರು. ಆಗ ಬೇಸರಗೊಂಡ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ(BS Yediyurappa) ಅವರು ನೀವು ಆ ನಿರ್ಧಾರ ಮಾಡಬೇಡಿ ಎಂದು ಹೇಳಿದರು. ಆಗ ಸ್ವಾಮೀಜಿ ಕೂಡ ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದರು.

HD Devegowda: 'ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ್ರು ಸೋತಿದ್ದು ತೃಪ್ತಿ ತಂದಿದೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News