ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ಪ್ರವರ್ಗ-1, ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ಪ್ರವರ್ಗ-1, ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ: KR Ramesh Kumar: 'ರಾಮಮಂದಿರ ಕಟ್ಟಿದರೆ ಸಾಕು ಎನ್ನುವವರಿಗೆ ದೇಶ ಬಿಟ್ಟಿದ್ದೇವೆ'
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ 2021-22 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ. 31 ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿತ್ತು.
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು/ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಈ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2022ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ವೆಬ್‌ಸೈಟ್ www.ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ www.bcwd.karnataka.gov.in ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಅತ್ಯಾಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಹೆಚ್ಚಿನ ವಿವರಕ್ಕೆ ಸಹಾಯವಾಣಿ/ ದೂರವಾಣಿ ಸಂಖ್ಯೆ 8050770005, 8050770004, ಇ-ಮೇಲ್ bcwd.scholarship@karnataka.gov.in ನ್ನು ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಸಂಖ್ಯೆ 080-35254757, ಇ-ಮೇಲ್ postmatrichelp@karnataka.gov.in ಮೂಲಕ ಸಂಪರ್ಕಿಸಬಹುದು ಎಂದು ಕೊಪ್ಪಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ