ಬೆಳಗಾವಿ : ಬೆಂಗಳೂರಿನ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ಸಾಲ ವಸೂಲಾತಿಗೆ ಕ್ರಮವಹಿಸಿ 729 ಠೇವಣಿ ಖಾತೆಗಳನ್ನು ಕ್ಲೋಸ್ ಮಾಡಿ, 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್ ಪ್ರಶ್ನೆಗೆ ವಿಧಾನಪರಿಷತ್ ನಲ್ಲಿ ಉತ್ತರಿಸಿದ ಸಚಿವರು, ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರ ಪ್ರಕರಣದ ಸಿಐಡಿ ವಿಚಾರಣೆ ಪ್ರಗತಿಯಲ್ಲಿದೆ. ಠೇವಣಿದಾರರಿಗೆ ಠೇವಣಿ ಹಣ ಹಿಂದಿರುಗಿಸಲು ಸರ್ಕಾರದಿಂದ "ಸಕ್ಷಮ ಪ್ರಾಧಿಕಾರ" ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಹೇಳಿದರು.
ಇದನ್ನೂ ಓದಿ : ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ OPS ಜಾರಿ: ಭಾಸ್ಕರ್ ರಾವ್
2013-14ರಿಂದ 2014-15ನೇ ಸಾಲಿನವರೆಗಿನ ಲೆಕ್ಕಪತ್ರಗಳ ಮರು ಲೆಕ್ಕ ಪರಿಶೋಧನೆ ಪೂರ್ಣಗೊಳಿಸಿದ್ದು, ವರದಿ ಬಿಡುಗಡೆ ಬಾಕಿ ಇದೆ. 2015-16ರಿಂದ 2019-20ರವರೆಗೆ ಮರು ಲೆಕ್ಕ ಪರಿಶೋಧನೆ ನಡೆಯುತ್ತಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಅಂದಾಜು 2000 ಠೇವಣಿದಾರರಿಗೆ ಅಂದಾಜು 260 ಕೋಟಿ ರೂ. ಠೇವಣಿ ಹಣ ಪಾವತಿಸಬೇಕಾಗಿರುತ್ತದೆ. ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿಯು ಕೈಗೊಂಡಿರುವ ಪರಿವೀಕ್ಷಣಾ ವರದಿಯ ಪ್ರಕಾರ ಅಂದಾಜು 280 ಕೋಟಿ ರೂ. ಅವ್ಯವಹಾರವಾಗಿರುವುದು ಕಂಡುಬಂದಿರುತ್ತದೆ. ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ : ವೀರಪ್ಪನ್ ಮುಖ್ಯ ಸಹಚರ ಜ್ಞಾನಪ್ರಕಾಶ್ ರಿಲೀಸ್ : ಮಾನವೀಯತೆ ಆಧಾರದಲ್ಲಿ ಜಾಮೀನು..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.