ರಾಮನಗರ : ಗ್ಯಾಸ್, ಪೆಟ್ರೋಲ್, ಡೀಸೆಲ್ ಅಡುಗೆ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಆದರೆ, ಅದ್ಯಾವುದರ ಬಗ್ಗೆಯೂ ಚರ್ಚೆ ಇಲ್ಲ, ಚಕಾರ ಇಲ್ಲ. ಬೇಡದ ವಿಚಾರಗಳ ಬಗ್ಗೆ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ಸಾಮಾನ್ಯ ಜನರ ಬೆನ್ನು ಮೂಳೆ ಮುರಿದಿದೆ, ರಾಜ್ಯ ಸರ್ಕಾರ ಏನ್ ಮಾಡ್ತಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್(Vatal Nagaraj), ಬೆಲೆ ಏರಿಕೆ ವಿಚಾರಗಳ ಬಗ್ಗೆ ಚರ್ಚೆಯಾಗಬೇಕು. ಮಹಾರಾಷ್ಟ್ರದಲ್ಲಿ ರಾಜ್ ಠಾಕ್ರೆ ಎಂಬಾತ ಆಜಾನ್ ಬಗ್ಗೆ ಬಾಯಿಬಿಟ್ಟಿದ್ದಾನೆ. ಮಸೀದಿಗಳಲ್ಲಿ ಧ್ವನಿವರ್ದಕ ಹಾಕಬಾರದೆಂದು ಹೇಳಿದ್ದಾನೆ. ಈಗ ಅದನ್ನ ಇಟ್ಟುಕೊಂಡು ಇಲ್ಲಿಯೂ ಸಹ ಧ್ವನಿ ಎತ್ತುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ, ಒಳ್ಳೆಯದಲ್ಲ. ನಮ್ಮ ಸಂಸ್ಕೃತಿಗೆ ಇದು ಒಳ್ಳೆಯದಲ್ಲ. ಬೆಕ್ಕು ಕಣ್ಣುಮುಚ್ಚಿ ಹಾಲುಕುಡಿದರೆ ಗೊತ್ತಾಗದ ರೀತಿ ಸರ್ಕಾರ ಇರಬಾರದು. ಇವತ್ತು ಹಲಾಲ್ ಮಾಂಸ ಬೇಡ ಅಂತಾರೆ, ಜಟ್ಕಾ ತಿನ್ನಿ ಅಂತಾರೆ. ಈಗ ಅಜಾನ್ ಬಗ್ಗೆ ಮಾತನಾಡುತ್ತಿದ್ದಾರೆ, ಇದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.


ಇದನ್ನೂ ಓದಿ : 2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ, ಕ್ರೀಡಾ ಪೋಷಕ ಪ್ರಶಸ್ತಿ ಘೋಷಣೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.