ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಕುರಿತಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ಥಾಮಿಗೆ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.



ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ.ಎಲ್ಲರ ಪರವಾಗಿ ಅಭಿನಂದನೆಗಳು.ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ.ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ" ಎಂದು ಅವರು ಸಿಎಂ ಗೆ ಪತ್ರ ಬರೆದಿದ್ದಾರೆ.


ಈಗ ವೀರೇಂದ್ರ ಹೆಗ್ಗಡೆ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಅವರು 'ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ.ವೀರೇಂದ್ರ ಹೆಗ್ಗಡೆಯವರು ನಾನು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ ಹಾಗೂ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಬರೆದಿರುವ ಪತ್ರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.