ಧಾರವಾಡ: ಹಿರಿಯ ಜಾನಪದ ಕಲಾವಿದ, ಗಾಯಕ ಬಸಲಿಂಗಯ್ಯ ಹಿರೇಮಠ(Basalingayya Hiremath) ಇಂದು ವಿಧಿವಶರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಅವರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಜಾನಪದ ಕಲಾವಿದ, ಗಾಯಕ(Folk Singer)ರಾಗಿ ಖ್ಯಾತವಾಗಿದ್ದ ಬಸಲಿಂಗಯ್ಯನವರು ಮೂಲತಃ ಧಾರವಾಡದವರು. ಜಾನಪದ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದ ಅವರು ಅನೇಕ ವರ್ಷಗಳ ಕಾಲದಿಂದ ಕಲಾಸೇವೆ ಮಾಡುತ್ತಿದ್ದರು. ಇವರ ಪತ್ನಿ ವಿಶ್ವೇಶ್ವರಿ ಹಿರೇಮಠ ಸಹ ಜಾನಪದ ಕಲಾವಿದೆಯಾಗಿ ಗುರುತಿಸಿಕೊಂಡಿದ್ದರು. ಈ ದಂಪತಿ ಜಾನಪದ ಸಂಶೋಧನಾ ಸಂಸ್ಥೆ ಮೂಲಕ ತಮ್ಮ ಕಲಾ ಸೇವೆಯನ್ನು ಸಲ್ಲಿಸುತ್ತಿದ್ದರು.
ಇದನ್ನೂ ಓದಿ: Raitha Sena: 'ಮಹದಾಯಿ ಹಾಗೂ ಕಳಸಾ-ಬಂಡೂರಿ ಕುರಿತು ಕಾಂಗ್ರೆಸ್ ಯಾಕೆ ಮೌನವಾಗಿದೆ'
ಬಸಲಿಂಗಯ್ಯನವರು ನೂರಾರು ಜಾನಪದ ಕಾರ್ಯಕ್ರಮದಲ್ಲಿ ನಡೆಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು ಎಂದು ತಿಳಿದುಬಂದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬಸಲಿಂಗಯ್ಯ ಕೊನೆಯುಸಿರೆಳೆದಿದ್ದಾರೆ.
ಸಿಎಂ ಬೊಮ್ಮಾಯಿ ಸಂತಾಪ
ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಕೇಳಿಕೊಳ್ಳುತ್ತೇನೆ. 2/2
ಓಂ ಶಾಂತಿ...
— Basavaraj S Bommai (@BSBommai) January 9, 2022
ಜಾನಪದ ಗಾಯಕ ಬಸಲಿಂಗಯ್ಯನವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಹಿರಿಯ ಜಾನಪದ ಕಲಾವಿದ, ಗಾಯಕ ಬಸಲಿಂಗಯ್ಯ ಹಿರೇಮಠ ಅವರ ನಿಧನರಾಗಿದ್ದು ತುಂಬಾ ದುಃಖದ ಸಂಗತಿ. ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು’ ಎಂದಿದ್ದಾರೆ.
ಇದನ್ನೂ ಓದಿ: ಡಿಕೆ ದಾಟಲಿಲ್ಲ, ಮೇಕೆಯಾದರೂ ದಾಟಲಿ!: ನದಿಗೆ ಇಳಿಯುವಾಗ ಜಾರಿಬಿದ್ದ ಡಿಕೆಶಿ ಟ್ರೋಲ್ ಮಾಡಿದ ಬಿಜೆಪಿ
‘ಬಸಲಿಂಗಯ್ಯನವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಕೇಳಿಕೊಳ್ಳುತ್ತೇನೆ. ಓಂ ಶಾಂತಿ...’ ಎಂದು ಹೆಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.