Deepak Thimmayya: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ!

Deepak Thimmayya joins Congress: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

Written by - Savita M B | Last Updated : Apr 11, 2024, 03:10 PM IST
  • ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ್ಯ
  • ದೀಪಕ್ ತಿಮ್ಮಯ್ಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ.
Deepak Thimmayya: ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಕಾಂಗ್ರೆಸ್ ಸೇರ್ಪಡೆ! title=

ಸದಾಶಿವನಗರ ನಿವಾಸದಲ್ಲಿ ಗುರುವಾರ ದೀಪಕ್ ತಿಮ್ಮಯ್ಯ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದೆಸಿ, ಹೂಗುಚ್ಛ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ಶಿವಕುಮಾರ್ ಅವರು ನಂತರ ಮಾಧ್ಯಮಗಳ ಜತೆ ಮಾತನಾಡಿದರು.

ಇದನ್ನೂ ಓದಿ-ಕೈ ಅಭ್ಯರ್ಥಿ ವಾಪಸ್ ಪಡೆದು ಮಹಾರಾಜರಿಗೆ ಬೆಂಬಲ ಕೊಡಬೇಕು

"ಹಿರಿಯ ಪತ್ರಕರ್ತರಾದ ದೀಪಕ್ ತಿಮ್ಮಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಕಚೇರಿ ನೀಡಲಾಗುವುದು. ಪಕ್ಷದ ವಿಚಾರವಾಗಿ ಯಾರೇ ನನ್ನನ್ನು ಸಂಪರ್ಕ ಮಾಡಲು ಅವರು ಸಹಕಾರ ನೀಡಲಿದ್ದಾರೆ.

ಇದನ್ನೂ ಓದಿ-ಕಾಂಗ್ರೆಸ್‌ಗೆ ಮತ ನೀಡಿದರೆ ದೇಶಕ್ಕೆ ಸುರಕ್ಷತೆ ಸಿಗಲ್ಲ : ಆರ್. ಅಶೋಕ 

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ್ಯ ಅವರು ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ನಾಯಕರನ್ನು ಸೃಷ್ಟಿಸುವವನು ನಾಯಕನೇ ಹೊರತು ಹಿಂಬಾಲಕರನ್ನು ಸೃಷ್ಟಿಸುವವನು ಅಲ್ಲ ಎಂಬಂತೆ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ನನಗೆ ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಮನವಿ ಮಾಡಿದ್ದೆ. ಅದನ್ನು ಒಪ್ಪಿ ಅವರು ಇಂದು ಪಕ್ಷಕ್ಕೆ ಸೇರ್ಪಡೆ ಆಗಿದ್ದು, ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದಾರೆ."

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News