ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಇನ್ನಿಲ್ಲ

ವಯೋ ಸಹಜ ಕಾಯಿಲೆಗಳಿಂದ ಬಳಲುತಿದ್ದ ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಭಾರತೀನಗರದಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರದಂದು ಕೊನೆಯುಸಿರೆಳೆದಿದ್ದಾರೆ.ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ  ಮಾದೇಗೌಡ ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು

Last Updated : Jul 17, 2021, 09:38 PM IST
  • ವಯೋ ಸಹಜ ಕಾಯಿಲೆಗಳಿಂದ ಬಳಲುತಿದ್ದ ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಭಾರತೀನಗರದಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರದಂದು ಕೊನೆಯುಸಿರೆಳೆದಿದ್ದಾರೆ.
  • ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ ಮಾದೇಗೌಡ ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು.
ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಇನ್ನಿಲ್ಲ  title=
Photo Courtesy: Facebook

ಬೆಂಗಳೂರು: ವಯೋ ಸಹಜ ಕಾಯಿಲೆಗಳಿಂದ ಬಳಲುತಿದ್ದ ಮಂಡ್ಯದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ಜಿ.ಮಾದೇಗೌಡ ಭಾರತೀನಗರದಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರದಂದು ಕೊನೆಯುಸಿರೆಳೆದಿದ್ದಾರೆ.ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ  ಮಾದೇಗೌಡ ಅವರನ್ನು ತುರ್ತು ನಿಗಾ ಘಟಕದಲ್ಲಿರಿಸಲಾಗಿತ್ತು

1980 ರ ದಶಕದಲ್ಲಿ ಆರ್. ಗುಂಡುರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡ, ಅಂದಿನ ಮಂಡ್ಯ ಜಿಲ್ಲೆಯ ಕಿರುಗವಾಲು ವಿಧಾನಸಭಾದಿಂದ ಆರಿ ಬಾರಿ ಆಯ್ಕೆಯಾದರು. ಅವರು 1989 ಮತ್ತು 1991 ರಲ್ಲಿ ಎರಡು ಬಾರಿ ಮಂಡ್ಯದಿಂದ ಲೋಕಸಭಾ ಸಂಸದರಾಗಿ ಆಯ್ಕೆಯಾದರು. ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿಯಾಗಿ ಮಾದೇಗೌಡ ಕಾವೇರಿ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದರು ಮತ್ತು ಅನೇಕ ರೈತರ ಹೋರಾಟದ ಭಾಗವಾಗಿದ್ದರು.

ಇದನ್ನೂ ಓದಿ: COVID-19: ಕೇಂದ್ರದಿಂದ 66 ಕೋಟಿ ಡೋಸ್‌ಗಳಷ್ಟು ಲಸಿಕೆ ಖರೀದಿಗೆ ಆರ್ಡರ್..! 

ಈಗ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ 'ಹಿರಿಯ ರೈತಪರ ಹೋರಾಟಗಾರರು, ಮಾಜಿ ಸಚಿವರು, ಮಾಜಿ ಸಂಸದರಾದ ಶ್ರೀ ಜಿ.ಮಾದೇಗೌಡರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಹಿರಿಯ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬವರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ"ಎಂದು ಸಂತಾಪ ಸೂಚಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News