ಮೈಸೂರು: ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಸೋಮವಾರ ಸಂಜೆ ಮೈಸೂರಿಗೆ ಆಗಮಿಸಿದರು.


COMMERCIAL BREAK
SCROLL TO CONTINUE READING

ಮೈಸೂರಿನ ನಂಜನಗೂಡು ತಾಲೂಕಿನಲ್ಲಿರುವ ಸುತ್ತೂರು ಮಠದಲ್ಲಿ ಇಂದು ನಡೆಯಲಿರುವ ಪರಮಪೂಜ್ಯ ಶ್ರೀ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ '103 ನೇ ಜಯಂತಿ ಮಹೋತ್ಸವ' ಮತ್ತು ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋಮವಾರ ಮಂಡಕಳ್ಳಿ ವಿಮಾನ ನಿಲ್ದಾಣದಕ್ಕೆ ಆಗಮಿಸಿದ  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಹೂಗುಚ್ಛವನ್ನು ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಉಪಸ್ಥಿತರಿದ್ದರು.