ಬೆಂಗಳೂರು : ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಅವರು ಬೆಳಗಿನ ಜಾವ ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್‌ಗೆ ಆಗಮಿಸಿದ ವೇಳೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ವೇಳೆ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ, ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎ (ಬೈರತಿ), ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಮ್, ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ನಗರ ಜಿಲ್ಲಾಧಿಕಾರಿ ಜಗದೀಶ್ ಜಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ರಾಮಭಂಟ ಆಂಜನೇಯನಿಗೆ ಇರುವ ಇತರೆ ನಾಮಗಳು ಯಾವುವು..?
ಗೌರವಾನ್ವಿತ ಉಪರಾಷ್ಟ್ರಪತಿಗಳು ಯಲಹಂಕ ಏರ್ ಫೋರ್ಸ್ ಸ್ಟೇಷನ್‌ನಿಂದ ಹೆಲಿಕಾಪ್ಟರ್‌ನಲ್ಲಿ ಹಾಸನ ಜಿಲ್ಲೆಯ ಶ್ರವಣಬೆಳಗೊಳ, ಮಂಡ್ಯ ಜಿಲ್ಲೆಯ ಮೇಲುಕೋಟೆ ಹಾಗೂ ಮೈಸೂರು ಜಿಲ್ಲೆಗೆ ಪ್ರಯಾಣ ಕೈಗೊಂಡರು. ರಾಜ್ಯದ ಈ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ ನೀಡಿದ ನಂತರ, ಅವರು ಇದೇ ದಿನ ನವದೆಹಲಿಗೆ ಮರಳುವ ನಿರೀಕ್ಷೆಯಿದೆ.









