ಮಡಿಕೇರಿ: ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದೆ. ಕೊಡಗು, ದಕ್ಷಿಣ ಕನ್ನಡ ಮತ್ತು ಮಂಗಳೂರು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ರಸ್ತೆಗಳು ಸೇರಿದಂತೆ ಜನವಸತಿ ಪ್ರದೇಶಗಳೆಲ್ಲಾ ಜಲಾವೃತಗೊಂಡಿವೆ.


COMMERCIAL BREAK
SCROLL TO CONTINUE READING

ಅಲ್ಲದೆ, ಮಡಿಕೇರಿ ಜಿಲ್ಲೆಯ ಹಲವೆಡೆ ಮನೆಗಳು ಕುಸಿದಿದ್ದು, ಹಲವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದುವರೆಗೂ 500ಕ್ಕೂ ಹೆಚ್ಚು ಮನೆಗಳು ಕುಸಿದಿದ್ದು, ಹಲವರಿಗೆ ಗಾಯಗಳಾಗಿವೆ. ಮುತ್ತಪ್ಪ ದೇವಾಲಯ ಬಳಿ ಇದ್ದ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಆದರೆ, ಆ ಕಟ್ಟಡದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕಟ್ಟಡ ಕುಸಿಯುವ ದೃಶ್ಯವನ್ನು ಕೆಲವರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.