VIDEO : ಟಿಕೆಟ್ ಸಿಗದಿದ್ದಕ್ಕೆ ಗಳಗಳನೆ ಕಣ್ಣೀರಿಟ್ಟ ನಮೋಶಿ
ಟಿಕೆಟ್ ಕೈತಪ್ಪಿದ್ದಕ್ಕೆ ಮಾಧ್ಯಮದ ಮುಂದೆ ಕಣ್ಣೀರಿಟ್ಟ ಬಿಜೆಪಿ ಅಭ್ಯರ್ಥಿ.
ಕಲಬುರಗಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗಳೆರಡೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಆದರೆ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳಲ್ಲಿ ಬಂಡಾಯದ ಬಿಸಿ ಹೆಚ್ಚಾಗುತ್ತಿದೆ.
ನಿನ್ನೆಯಷ್ಟೇ ಬಿಜೆಪಿ ತನ್ನ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಮಾಡಿದ್ದು, ಆ ಪಟ್ಟಿಯಲ್ಲಿ ಟಿಕೆಟ್ ಸಿಗದ ಕಾರಣ ಬಿಜೆಪಿಯ ಮಾಜಿ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.
ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಬಿಜೆಪಿ ನಾಯಕ
ಗುಲ್ಬರ್ಗದಲ್ಲಿ, ಬಿಜೆಪಿ ನಾಯಕ ಶಶಿಲ್ ನಮೋಶಿಗೆ ಟಿಕೆಟ್ ಸಿಗದ ಕಾರಣಕ್ಕೆ ಬೆಂಬಲಿಗರು ತೀವ್ರ ಹೋರಾಟ ನಡೆಸಿದ್ದಾರೆ. ನಮೋಶಿ ದೀರ್ಘಕಾಲದಿಂದ ಪಕ್ಷದ ಕಾರ್ಯಕರ್ತರಾಗಿದ್ದು, ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದ ನಾಯಕರು ಇದೀಗ ಎರಡನೇ ಪಟ್ಟಿಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶಶೀಲ್ ನಮೋಶಿ ಅವರ ಹೆಸರನ್ನು ಕೈಬಿಟ್ಟಿದ್ದಾರೆ ಎಂದು ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕಾಗಿ ಮನನೊಂದ ಶಶೀಲ್ ನಮೋಶಿ ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.