ಮಹಿಳೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ: ನಾಲ್ವರು ಆರೋಪಿಗಳ ಬಂಧನ

ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ ನಾಲ್ವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ.

Written by - Zee Kannada News Desk | Last Updated : Sep 13, 2021, 04:50 PM IST
  • ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ
  • ಮಹಿಳೆಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿ ವಿಕೃತಿ
  • ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ, ಗೃಹ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ಮಹಿಳೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ: ನಾಲ್ವರು ಆರೋಪಿಗಳ ಬಂಧನ title=
ಯಾದಗಿರಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ (Photo Courtesy: @Zee News)

ಯಾದಗಿರಿ: ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ ನಾಲ್ವರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಯಾದಗಿರಿ(Yadgir) ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಡಾ.ಸಿ.ಬಿ.ವೇದಮೂರ್ತಿ ಹೇಳಿದ್ದಾರೆ. ಮಹಿಳೆ ಎಷ್ಟೇ ಅಂಗಲಾಚಿ ಬೇಡಿಕೊಂಡರೂ ಬಿಡದೆ ಆಕೆಯನ್ನು ಥಳಿಸಿ ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತನ್ನನ್ನು ಬಿಟ್ಟುಬಿಡುವಂತೆ ಕಣ್ಣೀರು ಹಾಕಿದರೂ ಕೇಳದೆ ಆಕೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಕೃತಿ ಮೆರೆದ ಆರೋಪದ ಮೇರೆಗೆ ಭೀಮಾಶಂಕರ್ (28), ನಿಂಗರಾಜ್ (24), ಅಯ್ಯಪ್ಪ (23), ಮತ್ತು ಶರಣು (22) ಎಂಬ ನಾಲ್ವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ವಿಧಿವಶ

ಒಂದು ವರ್ಷದ ಹಿಂದಿನ ಘಟನೆಯ ವಿಡಿಯೋ ವೈರಲ್  

ಮಹಿಳೆಯನ್ನು ಥಳಿಸಿ ನಾಲ್ವರು ಆರೋಪಿಗಳು ಲೈಂಗಿಕ ದೌರ್ಜನ್ಯ(Sexual Harassment) ಎಸಗಿರುವ ಈ ಘಟನೆ ಒಂದು ವರ್ಷದ ಹಿಂದೆ ನಡೆದಿದೆ ಎನ್ನಲಾಗಿದೆ. ಆದರೆ ಇತ್ತೀಚೆಗೆ ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಯಾದಗಿರಿ ಪೊಲೀಸರು ತನಿಖೆ ಆರಂಭಿಸಿದ್ದರು. ಕೃತ್ಯವೆಸಗಿದ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಶಹಾಪುರದ ರಸ್ತಾಪುರ ಕ್ರಾಸ್ ಬಳಿ ಕರೆದೊಯ್ದು, ಮಹಜರು ನಡೆಸಿದ್ದಾರೆ

ವೈರಲ್ ಆದ ವೀಡಿಯೋ(Viral Video)ದಲ್ಲಿ ನಾಲ್ಕೈದು ಪುರುಷರು ಮಹಿಳೆಯ ಬಟ್ಟೆಯನ್ನು ಹರಿದು, ಹೊಡೆದು ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕರು ಒತ್ತಾಯಿಸಿದ್ದರು. ಕೂಡಲೇ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಎತ್ತಿನಗಾಡಿ ಪ್ರತಿಭಟನೆಗೆ ಸಿದ್ದು & ಡಿಕೆಶಿ ಕಲಹದ ಬಂಡಿ ಎಂದ ಬಿಜೆಪಿ..!

ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ

ಯಾದಗಿರಿ ಜಿಲ್ಲೆಯಲ್ಲಿಯೂ ಮಹಿಳೆಯ ಮೇಲೆ ಗ್ಯಾಂಗ್​ರೇಪ್(Gangrape Case) ನಡೆದಿದೆ. ರಾಜ್ಯದಲ್ಲಿ ಮಹಿಳೆಯರು, ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ(BJP Govt.)ದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ(Siddaramaiah), ಯಾದಗಿರಿಯಲ್ಲಿ ಮಹಿಳೆಯ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಕಲಾಪದಲ್ಲಿ ಕೇಳುತ್ತೇನೆಂದು ಮಾಧ್ಯಮದವರಿಗೆ ತಿಳಿಸಿದ್ದಾರೆ. ಸಂಜೆ ನಂತರ ಹೆಣ್ಣುಮಕ್ಕಳು ಎಲ್ಲೂ ಹೋಗಬಾರದೆನ್ನುತ್ತಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ತೀರ್ಥಹಳ್ಳಿ ಕೇಸ್​ ಬಗ್ಗೆ ಆರಗ ಜ್ಞಾನೇಂದ್ರ ಏನು ಹೇಳಿದರು..? ರಾಜ್ಯದಲ್ಲಿ ನಿರಂತರವಾಗಿ ಹೀನಕೃತ್ಯಗಳು ನಡೆಯುತ್ತಿದೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ? ರಾಜ್ಯದಲ್ಲಿ ಮಹಿಳೆಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದ ಗೃಹಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News