ಬೆಂಗಳೂರು: ಹಾಸನದಲ್ಲಿ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಇದೀಗ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದಾರೆ. “ತಂದೆ, ತಾಯಿ, ತಾತ ಮತ್ತು ಹೆಚ್ ಡಿ ಕುಮಾರಸ್ವಾಮಿ ಬಳಿ ನಾನು ಕ್ಷಮೆ ಕೇಳುತ್ತೇನೆ. ನಾಡಿನ ಜನತೆ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆ ಕೇಳುತ್ತೇನೆ” ಎನ್ನುತ್ತಾ ವಿಡಿಯೋ ಬಿಡುಗಡೆ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದಕ್ಷಿಣ ಭಾರತದ ಈ ನಟನೆಂದರೆ ವಿರಾಟ್’ಗೆ ಪಂಚಪ್ರಾಣ: ಆತ ಪ್ರಶಸ್ತಿ ಗೆದ್ದಾಗ ಕುಣಿದು ಕುಪ್ಪಳಿಸಿದ್ರಂತೆ ಕಿಂಗ್ ಕೊಹ್ಲಿ


ವಿಡಿಯೋದಲ್ಲಿ ಹೇಳಿದ್ದು ಹೀಗೆ…


“ಚುನಾವಣೆ ನಡೆದ ಸಂದರ್ಭದಲ್ಲಿ ನನ್ನ ವಿರುದ್ಧ ಯಾವುದೇ ಕೇಸ್ ದಾಖಲಾಗಿರಲಿಲ್ಲ. ಅಷ್ಟೇ ಅಲ್ಲದೆ, ಎಸ್ಐಟಿ ಕೂಡ ರಚನೆ ಆಗಿರಲಿಲ್ಲ. ಏ.26ರಂದು ನಾನು ವಿದೇಶಕ್ಕೆ ಹೋಗುವುದು ನಿರ್ಧಾರವಾಗಿತ್ತು. ವಿದೇಶದಲ್ಲಿ ಉಳಿದುಕೊಂಡು ಮೂರ್ನಾಲ್ಕು ದಿನದ ಬಳಿಕ ಯೂಟ್ಯೂಬ್‌ ಮತ್ತು ನ್ಯೂಸ್ ಚಾನೆಲ್ ನೋಡಿದಾಗ ಈ ಬಗ್ಗೆ ಮಾಹಿತಿ ದೊರಕಿತು. ಇದಾದ ನಂತರ ಎಸ್ಐಟಿ ಕೂಡ ನನಗೆ ನೋಟಿಸ್ ಕೊಡುವ ಕೆಲಸ ಮಾಡಿತು. ಎಸ್ಐಟಿ ನೋಟಿಸ್‌ಗೆ ಎಕ್ಸ್‌ ಖಾತೆ ಮತ್ತು ನಮ್ಮ ಲಾಯರ್ ಮುಖಾಂತರ 7 ದಿನಗಳ ಸಮಯ ಕೇಳಿದ್ದೆನು. ಈ ಏಳು ದಿನ ಸಮಯ ಕೇಳಿದ ಮರುದಿನವೇ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕರು ಈ ವಿಚಾರವನ್ನು ಪ್ರಚಾರ ಮಾಡಲು ಪ್ರಾರಂಭಿಸಿದರು. ಒಂದು ರಾಜಕೀಯ ಪಿತೂರಿ ಕೆಲಸ ಮಾಡಲು ಮುಂದಾದರು.”


“ಇದೆಲ್ಲವನ್ನು ನೋಡಿ ನಾನು ಡಿಪ್ರೆಶನ್‌’ಗೆ ಒಳಗಾದೆ, ಇದರಿಂದ ಐಸೋಲೇಷನ್‌’ಗೆ ಒಳಗಾಗಿದ್ದೆನು. ಇದರಿಂದಾಗಿ ನಿಮ್ಮೆಲ್ಲರ ಮುಂದೆ ನಾನು ಕ್ಷಮೆ ಕೇಳುತ್ತೇನೆ. ಇದಾದ ನಂತರ ಹಾಸನದಲ್ಲಿ ಕೆಲವು ಶಕ್ತಿಗಳು ನನ್ನ ವಿರುದ್ಧ ಪಿತೂರಿ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ನಾನೇನು ಬೆಳೆಯುತ್ತಿದ್ದೇನೆ, ಅದನ್ನು ಕುಗ್ಗಿಸಬೇಕು ಎನ್ನುವ ರೀತಿಯಲ್ಲಿ  ಏನೇನೋ ಪ್ರಕರಣಗಳಲ್ಲಿ ಸಿಲುಕಿಸುವ ಕೆಲಸ ಮಾಡಿದ್ದಾರೆ. ಇದರಿಂದ ಮತ್ತಷ್ಟು ಆಘಾತಕ್ಕೆ ಒಳಗಾಗಿ ನಾನೇ ದೂರ ಇದ್ದೆ”


ಇದನ್ನೂ ಓದಿ: ಒಂದೊಮ್ಮೆ 200 ರೂ.ಗೆ ಕ್ರಿಕೆಟ್ ಆಡಿದ್ದ ಹಾರ್ದಿಕ್ ಪಾಂಡ್ಯ ಈಗ ಎಷ್ಟು ಕೋಟಿ ಆಸ್ತಿ ಒಡೆಯ?


“ಹೀಗಾಗಿ ಈ ಘಟನೆ ಬಗ್ಗೆ ಅನ್ಯತಾ ಭಾವಿಸುವುದು ಬೇಡ. ನಾನೇ ಖುದ್ದಾಗಿ ಶುಕ್ರವಾರ ಮೇ 31ರಂದು 10 ಗಂಟೆಗೆ ಎಸ್ಐಟಿ ಮುಂದೆ ಬಂದು ಸಂಪೂರ್ಣವಾಗಿ ಸಹಕಾರ ನೀಡುವ ಮುಖಾಂತರ ಪ್ರಕರಣದ ತನಿಖೆಯಲ್ಲಿ ಭಾಗಿಯಾಗುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆಯಿದೆ. ಖಂಡಿತವಾಗಿಯೂ ಈ ಸುಳ್ಳು ಪ್ರಕರಣಗಳಿಂದ ಹೊರಬರುವ ಕೆಲಸವನ್ನು ನ್ಯಾಯಾಲಯದ ಮುಖಾಂತರವೇ ಮಾಡಿಕೊಳ್ಳುತ್ತೇನೆ. ದೇವರು, ಜನರು ಹಾಗೂ ಕುಟುಂಬದ ಆಶೀರ್ವಾದ ನನ್ನ ಮೇಲಿರಲಿ. ನಾನು ಮೇ 31ರಂದು ಬಂದು ಈ ಎಲ್ಲ ವಿಚಾರಕ್ಕೆ ತೆರೆ ಎಳೆಯುವ ಕೆಲಸ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇರಲಿ” ಎಂದು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ