ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಟಿ.ಎಂ. ವಿಜಯ್ ಭಾಸ್ಕರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING


ಈ ಹಿಂದೆ ಬಿಬಿಎಂಪಿ ಆಡಳಿತಾಧಿಕಾರಿಯಾಗಿ, ಜಲಮಂಡಳಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದ, ಟಿ.ಎಂ. ವಿಜಯಭಾಸ್ಕರ್ ಸದ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 


ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರ ಸೇವಾವಧಿ ಇಂದು ಕೊನೆಗೊಳ್ಳಲಿದ್ದು, ರತ್ನಪ್ರಭಾ ಅವರು ಇಂದು ಸಂಜೆ ವಿಜಯ್ ಭಾಸ್ಕರ್ ಅವರಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆ ಇದೆ.


ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಮತ್ತೆ ಮೂರು ತಿಂಗಳು ಅಧಿಕಾರದಲ್ಲಿ ಮುಂದುವರಿಸಲು ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಟಿ.ಎಂ. ವಿಜಯ್ ಭಾಸ್ಕರ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಮೂಲಕ ಮುಂದಿನ ಮುಖ್ಯಮಂತ್ರಿ ಯಾರಾಗುವರು ಎಂದು ಮೂಡಿದ್ದ ಕುತೂಹಲಕ್ಕೆ ತೆರೆಬಿದ್ದಿದೆ.