ವಿಮ್ಸ್‌ ದುರಂತ : ಮೃತರಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ಕಾಂಗ್ರೆಸ್‌ ಒತ್ತಾಯ

ವಿಮ್ಸ್‌ ದುರಂತ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತ ವಿಧಾನಸಭೆ ಅಧಿವೇಶನದಲ್ಲಿವೂ ರೋಗಿಗಳ ಸಾವಿನ ಕುರಿತು ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ಆರೋಪಗಳ ಮಳೆ ಸುರಿಯುತ್ತಿದೆ. ಅಲ್ಲದೆ, ಟ್ಟೀಟ್‌ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್‌ ಮೃತ ರೋಗಿಗಳಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

Written by - Krishna N K | Last Updated : Sep 15, 2022, 04:48 PM IST
  • ವಿದ್ಯುತ್‌ ಕೈಕೊಟ್ಟು, ಜನರೇಟರ್‌ ಕೆಲಸ ಮಾಡದೆ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಇಬ್ಬರು ರೋಗಿಗಳು ಸಾವು
  • ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾದ ವಿಮ್ಸ್‌ ದುರಂತ
  • ಮೃತ ರೋಗಿಗಳಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಒತ್ತಾಯ
ವಿಮ್ಸ್‌ ದುರಂತ : ಮೃತರಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ಕಾಂಗ್ರೆಸ್‌ ಒತ್ತಾಯ title=

ಬೆಂಗಳೂರು : ವಿಮ್ಸ್‌ ದುರಂತ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತ ವಿಧಾನಸಭೆ ಅಧಿವೇಶನದಲ್ಲಿವೂ ರೋಗಿಗಳ ಸಾವಿನ ಕುರಿತು ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ಆರೋಪಗಳ ಮಳೆ ಸುರಿಯುತ್ತಿದೆ. ಅಲ್ಲದೆ, ಟ್ಟೀಟ್‌ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್‌ ಮೃತ ರೋಗಿಗಳಿಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ವಿಮ್ಸ್ ಆಸ್ಪತ್ರೆಯ ಸಾವುಗಳಿಗೆ ವಿದ್ಯುತ್ ಕಡಿತ, ವೆಂಟಿಲೇಟರ್ ಕಾರಣವಲ್ಲ ಎಂದಾದರೆ ಉಳಿದ ರೋಗಿಗಳನ್ನು ಸ್ಥಳಾಂತರಿಸಿದ್ದೇಕೆ..? ಇದು ವಿದ್ಯುತ್ ಕಡಿತದಿಂದ ಆಗಿದ್ದೋ, ಕಳಪೆ ವೆಂಟಿಲೇಟರ್‌ಗಳಿಂದ ಆಗಿದ್ದೋ, ಅಥವಾ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಆಗಿದ್ದೋ..? ತನಿಖೆಯಾಗಬೇಕು. ಸಿಎಂ ಬಸವರಾಜ ಬೊಮ್ಮಾಯಿ ಅವರೇ, ಮೃತರಿಗೆ 25 ಲಕ್ಷ ಪರಿಹಾರ ಕೊಡಲು ಕ್ರಮ ಕೈಗೊಳ್ಳಿ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಅಭಾವದಿಂದ ಆದ ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದು ಕೈ ಆರೋಪಿಸಿದೆ.

ಇದನ್ನೂ ಓದಿ: ಬಂಧನ ಭೀತಿಯಲ್ಲಿ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ!

ಅಲ್ಲದೆ, ಆರೋಗ್ಯ ಸಚಿವರು ಹಿಂದೆ ಚಾಮರಾಜನಗರದಲ್ಲಿ ಆಕ್ಸಿಜನ್ ಅಭಾವದಿಂದ ಆದ ಸಾವುಗಳಿಗೆ ಸುಳ್ಳು ಹೇಳಿದಂತೆ ಈಗಲೂ ಪಲಾಯನ ಮಾಡುವ ಅಗತ್ಯವಿಲ್ಲ. ಸಚಿವ ಸುಧಾಕರ್‌ ಅವರು ಬಂಡತನ ಬಿಟ್ಟು ಈ ಸಾವುಗಳ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಘಟನೆ ಹಿನ್ನೆಲೆ 

ಬಳ್ಳಾರಿ ವಿಮ್ಸ್‌ನಲ್ಲಿ ವಿದ್ಯುತ್‌ ಕೈಕೊಟ್ಟು, ಜನರೇಟರ್‌ ಕೆಲಸ ಮಾಡದೆ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಕರೆಂಟ್‌ ಕೈಕೊಟ್ಟಿದ್ದಕ್ಕೂ ಸಾವಿಗೂ ಸಂಬಂಧವಿಲ್ಲ ಎಂದು ವಿಮ್ಸ್‌ ಮೂಲಗಳು ತಿಳಿಸಿವೆ. ಮೃತರನ್ನು ಮೌಲಾ ಹುಸೇನ್‌ ಮತ್ತು ಚಿಟ್ಟೆಮ್ಮ ಎಂದು ಗುರುತಿಸಲಾಗಿದೆ. ವಿಮ್ಸ್‌ನಲ್ಲಿ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಕರೆಂಟ್‌ ಇರಲಿಲ್ಲ. ಜನರೇಟರ್‌ ಇದ್ದರೂ ಕೆಲಸ ಮಾಡಲಿಲ್ಲ. ಪರಿಣಾಮ ಐಸಿಯುನಲ್ಲಿದ್ದ ವೆಂಟಿಲೇಟರ್‌ಗಳು ಸ್ಥಗಿತಗೊಂಡು ರೋಗಿಗಳು ಮೃತಪಟ್ಟಿದ್ದಾರೆ ಎಂದು ಮೃತ ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News