ಯೋಗೀಶ್ ಗೌಡ ಕೊಲೆ ಪ್ರಕರಣ: ಧಾರವಾಡ ಪ್ರವೇಶಕ್ಕೆ ವಿನಯ ಕುಲಕರ್ಣಿಗಿಲ್ಲ ಅನುಮತಿ
Hubballi Dharwad mayoral elections: ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.
ಧಾರವಾಡ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಿಸಲು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಅನುಮತಿ ನೀಡಿಲ್ಲ. ಧಾರವಾಡ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದ ಮನವಿಯನ್ನು ನ್ಯಾಯಾಲಯ ನಿರಾಕರಿಸಿದೆ. ಧಾರವಾಡ ಭೇಟಿಗೆ ಅನುಮತಿ ನಿರಾಕರಿಸಿ ಕೋರ್ಟ್ ಆದೇಶಿಸಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಧಾರವಾಡ ಭೇಟಿಗೆ ಅನುಮತಿ ಸಿಕ್ಕಿಲ್ಲ.
ಜೂ.20 ರಂದು ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಥಳೀಯ ಶಾಸಕರು, ಎಂಎಲ್‌ಸಿಗಳಿಗೆ ಮತದಾನ ಮಾಡುವ ಹಕ್ಕು ಇರುತ್ತದೆ. ಹೀಗಾಗಿ ಶಾಸಕರಾಗಿರುವ ಕಾರಣ ವಿನಯ್ ಕುಲಕರ್ಣಿ ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ. ಈ ಕಾರಣಕ್ಕಾಗಿ ಧಾರವಾಡ ಪ್ರವೇಶಿಸದಂತೆ ವಿಧಿಸಿರುವ ನಿರ್ಬಂಧವನ್ನು ಸಡಿಲಿಸಬೇಕು ಎಂದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ನ್ಯಾಯಾಲಯ ಸೂಚಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರ ಮನವಿಯನ್ನು ತಿರಸ್ಕರಿಸಿದೆ.
ಇದನ್ನೂ ಓದಿ: ಮಹಿಳೆಯರಿಗೆ ಫ್ರೀ ಬಸ್ ಎಫೆಕ್ಟ್.. ಪುಣ್ಯಕ್ಷೇತ್ರಗಳು ಫುಲ್ ರಶ್
ಕೊಲೆ ಪ್ರಕರಣದ ಸಾಕ್ಷಿಯ ತಾಯಿ ಪಾಲಿಕೆ ಸದಸ್ಯರು. ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿ ಆಗಿರುತ್ತಾರೆ. ಹೀಗಾಗಿ ಅನುಮತಿ ನೀಡದಂತೆ ಸಿಬಿಐ ಎಸ್‌ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದ್ದಾರೆ. ವಾದ - ವಿವಾದ ಆಲಿಸಿದ ಬಳಿಕ, ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶ ಬಿ. ಜಯಂತಕುಮಾರ್ ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಭಾರತೀಯ ಜನತಾ ಪಕ್ಷದ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಸೇರಿ ಹಲವರನ್ನು ಆರೋಪಿಗಳನ್ನಾಗಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡುವ ವೇಳೆಯೇ ಹಾಕಲಾಗಿದೆ. ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವಾಗ ಧಾರವಾಡ ಜಿಲ್ಲೆಗೆ ನೋ ಎಂಟ್ರಿ ಸೇರಿದಂತೆ ನಾಲ್ಕು ಷರತ್ತುಗಳನ್ನು ಸುಪ್ರೀಂ ಕೋರ್ಟ್ ವಿಧಿಸಿತ್ತು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವೇಳೆಯೂ ಧಾರವಾಡ ಪ್ರವೇಶಿಸಲು ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶಕ್ಕೆ ಅನುಮತಿಯನ್ನು ಈ ಹಿಂದೆಯೇ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಇದನ್ನೂ ಓದಿ: ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ನೆರವಾಗಲು ಪೊಲೀಸರಿಂದ ವಿನೂತನ ಪ್ರಯತ್ನ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.