ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆ

ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ,  ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು. 

Written by - Yashaswini V | Last Updated : Apr 25, 2024, 03:03 PM IST
  • ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬೀಸುತ್ತಿರುವ ಬದಲಾವಣೆಯ ಗಾಳಿಗೆ ಸಾಕ್ಷಿಯಾದ ಬೃಹತ್ ಜನಸಾಗರ
  • ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಹಸೂಟಿ ಗೆಲುವಿಗೆ ಶಪಥ ಮಾಡಿದ ಘಟಾನುಘಟಿ ನಾಯಕರು
  • ಅತೀ ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿಯವರಿಂದ ಹುಬ್ಬಳ್ಳಿ-ಧಾರವಾಡ ಜನಕ್ಕೆ ಏನು ಸಿಕ್ತು: ಸಿಎಂ ಪ್ರಶ್ನೆ
ರಾಜ್ಯದ ಜನರ ತೆರಿಗೆ ಹಣಕ್ಕೆ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು: ಸಿಎಂ ಸಿದ್ದರಾಮಯ್ಯ ಕರೆ  title=

ಶಿಗ್ಗಾಂವ್ (ತಡಸ ಕ್ರಾಸ್) : ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರು ಕರೆ ನೀಡಿದರು. 

ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರ (Hubli Dharwad Lok Sabha Constituency)ದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಹಸೂಟಿ ಪರವಾಗಿ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Chief Minister Siddaramaiah),  ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿ (Prahlad Joshi) ಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ,  ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. 

ಇದನ್ನೂ ಓದಿ- ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ

ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ (Drought) ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು (Drought Relief) ಬಿಡುಗಡೆ ಮಾಡಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ ಎಂದರು. 

ಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಹಸೂಟಿಯವರು ಈ ಬಾರಿ ಗೆದ್ದೇ ಗೆಲ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು. 

ಇದನ್ನೂ ಓದಿ- "ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತ"-ಸಿಎಂ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Minister Santosh Lad) , ಮಾಜಿ ಸಚಿವ ವಿನಯ್ ಕುಲಕರ್ಣಿ, ಲೋಕಸಭಾ ಅಭ್ಯರ್ಥಿ ವಿನೋದ್ ಹಸೂಟಿ ಸೇರಿ ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಪ್ರಹ್ಲಾದ್ ಜೋಶಿ ಸೋಲಿಸಲು ಶಪಥ: 
ಸಚಿವರಾದ ಸಂತೋಷ್ ಲಾಡ್, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜತೆಗೆ ಶಾಸಕರಾದ ಕೋನರೆಡ್ಡಿ, ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ನಾಯಕರಾದ ಯಾಸಿರ್ ಖಾನ್ ಪಠಾಣ್,  ಸೋಮಣ್ಣ ಬೇವಿನಮರದ , ಅಜೀಂ ಪೀರ್ ಖಾದ್ರಿ ಸೇರಿ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರುಗಳು ಒಟ್ಟಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಶಪಥ ಮಾಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News