ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.43 ರಷ್ಟು ಹೆಚ್ಚಳವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ರಾಜ್ಯ ಸರ್ಕಾರ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗೂಂಡಾ ರಾಜ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಹಿಡಿದರೂ ಅವರನ್ಮು ರಾಜಕೀಯ ಪ್ರಭಾವ ಬಳಸಿ ಬಿಡುಗಡೆ ಮಾಡಿಸುತ್ತಿದ್ದಾರೆ. ಹಪ್ತಾ ವಸೂಲಿ ಹೆಚ್ಚಾಗಿದೆ. ಪೊಲಿಸ್ ಸ್ಟೇಷನ್ ಗಳು ಸೆಟ್ಲಮೆಂಟ್ ಕೇಂದ್ರಗಳಾಗಿವೆ ಎಂದು ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಕಾಲೇಜು ಆವರಣದಲ್ಲಿಯೇ ಒಬ್ಬ ಯುವಕ ಯುವತಿಗೆ ಒಂಬತ್ತು ಬಾರಿಬಿರಿದು ಓಡಿ ಹೋಗುತ್ತಾನೆ ಎಂದರೆ ಅವನ ಹಿಂದೆ ಯಾವ ಶಕ್ತಿ ಇದೆ. ಗೃಹ ಸಚಿವರು ಅದೊಂದು ಪ್ರೇಮ ಪಕ್ರರಣ ಇಷ್ಟು ಹಗುರ ಹೇಳಿಕೆ ಕೊಟ್ಟರೆ ಅಪರಾಧಿಗಳಿಗೆ ಪುಷ್ಟಿ ಬರದೇ ಇನ್ನೇನಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಈ ರೀತಿ ಪ್ರಕರಣ ನಡೆಯದೆ ಇನ್ನೇನಾಗುತ್ತದೆ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿದೆ, ರಾಜ್ಯಪಾಲರ ಆಡಳಿತ ಹೇರಲು ಬಿಜೆಪಿ ಹುನ್ನಾರ: ಡಿಸಿಎಂ ಡ
ಗೃಹ ಸಚಿವರು ಪ್ರೇಮ ಪ್ರಕರಣ ಅಂತಾರೆ. ಹುಬ್ಬಳ್ಳಿ ಕಮಿಷನರ್ ಅವಳು ಲವ್ ನಿರಾಕರಣೆ ಮಾಡಿರೊದಕ್ಕೆ ಅವನು ಕೊಲೆ ಮಾಡಿದ್ದಾನೆ ಎಂದು ಹೇಳಿದ್ದಾರೆ. ಇಷ್ಟೊಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಹಾವೇರಿಯಲ್ಲಿ ಅತ್ಯಾಚಾರ ಪ್ರಕರಣ ನಡೆದರೆ ಅದನ್ನು ಮುಚ್ಚಿಹಾಕುವ ಯತ್ನ ಮಾಡಿದರು. ನಂತರ ಆ ಮಹಿಳೆ ಬಹಿರಂಗವಾಗಿ ಹೇಳಿಕೆ ಕೊಟ್ಟ ಮೇಲೆ ಕೇಸ್ ದಾಖಲಿಸಿಕೊಂಡರು. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತೃಗೊಳಿಸಿದರು. ಸಿಎಂ, ಡಿಜಿಪಿ ಇದ್ದಾಗಲೇ ಈ ರೀತಿ ನಡೆಯುತ್ತಿದೆ ಎಂದರೆ ಕಾನೂನು ಸುವ್ಯವಸ್ಥೆ ಎಲ್ಲಿದೆ ಎಂದು ಪ್ರಶ್ನಿಸಿದರು. ಹಾವೇರಿ ಪ್ರಕರಣದಲ್ಲಿ ಸಿಎಂ ಸ್ಥಳಿಯ ಶಾಸಕರಿಗೆ ನೋಡಿಕೊಳ್ಳುವಂತೆ ಸೂಚಿಸುತ್ತಾರೆ. ಅಂದರೆ ಅವರು ಏನೂ ಮಾತನಾಡದಂತೆ ನೋಡಿಕೊಳ್ಳಲು ಹೇಳುತ್ತಾರೆ ಎಂದು ಆರೋಪಿಸಿದರು.
ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಿಯೂ ಕೊಲೆ ಪ್ರಕರಣಗಳು ನಡೆದಿದ್ದವು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ 43% ರಷ್ಡು ಹೆಚ್ಚಳವಾಗಿವೆ. ಡಿಸಿಎಂ ಆದವರು ಈ ರೀತಿಯ ಪ್ರಕರಣಗಳನ್ನು ಸಮರ್ಥನೆ ಮಾಡಿಕೊಳ್ಳುತ್ತೀರಾ. ರಾಜ್ಯದಲ್ಲಿ ಮಾಸ್ ಮಾರ್ಡರ್ ಗಳು ಯಾಕೆ ನಡೆಯುತ್ತಿವೆ ಎನ್ನುವ ಬಗ್ಗೆ ಚಿಂತನೆ ಆಗಬೇಕು. ಹುಬ್ಬಳ್ಳಿ ಯುವತಿ ಕೊಲೆ ಅಪರಾಧ ವಿಭಾಗದ ಡಿಜಿಪಿ ಉಸ್ತುವಾರಿ ವಹಿಸಬೇಕು. ಹುಬ್ಬಳ್ಳಿ ಪ್ರಕರಣದಲ್ಲಿ ಇನ್ನೂ ನಾಲ್ಕು ಜನ ಭಾಗಿಯಾಗಿದ್ದಾರೆ ಎಂದು ಮೃತ ಯುವತಿಯ ತಂದೆನೇ ಮಾಹಿತಿ ಕೊಟ್ಟಿದ್ದಾರೆ. ಪೋಲೀಸರು ಅವರನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ:ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯ ಪೂರ್ಣ : ಈ ದಿನ ಹೊರಬೀಳಲಿದೆ CBSE 10th Result
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲರು, ಬೊಮ್ಮಾಯಿಯವರಿಗೆ ವಯಸ್ಸಾಗಿದೆ ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ತಶ್ನೆಗೆ ಶಿವಾನಂದ ಪಾಟೀಲರು ನನಗಿಂತ ಹಿರಿಯರು ಅವರು ತಮ್ಮ ಜಿಲ್ಲೆಯ ಕಡೆ ಗಮನ ಹರಿಸಲಿ, ಅವರು ಮಂತ್ರಿ ಇದ್ದಾರೆ. ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ ಹೋರಾಟ ಮಾಡಿದ್ದರು. ಅವರಿಗೆ ಟಿಕೆಟ್ ತಪ್ಪಿಸಿ ತಮ್ಮ ಮಗಳಿಗೆ ಟಿಕೆಟ್ ಕೊಡಿಸಿದ್ದಾರೆ. ಅವರ ಎಲೆಯಲ್ಲಿ ಏನು ಬಿದ್ದಿದೆ ಅಂತ ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ವಯಸ್ಸು ಎಷ್ಟು ಅನ್ನುವುದು ಮುಖ್ಯವಲ್ಲ. 65ನೇ ವಯಸ್ಸಿನಲ್ಲಿ ಎಷ್ಟು ಅಭಿವೃದ್ಧಿ ಮಾಡಿದ್ದೇನೆ ಎನ್ನುವುದನ್ನು ನೋಡಬೇಕು. ಎಚ್. ಕೆ ಪಾಟೀಲರು ನನಗಿಂತ ಹತ್ತು ವರ್ಷ ಹಿರಿಯರು ಅವರು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಯಾರ ಎದೆಯಲ್ಲಿ ಏನಿದೆಯೊ ಯಾರಿಗೆ ಗೊತ್ತು ಅವರನ್ನೇ ಕೇಳಬೇಕು ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.