Year Ender 2024 : ಜನರಿಗೆ ಮಾದರಿಯಾಗಬೇಕಾದ ರಾಜಕೀಯ ನಾಯಕರು, ಸಿನಿಮಾ ನಟರು ಕೊಲೆ, ಆತ್ಯಾಚಾರ ಹಾಗೂ ವಂಚನೆ ಸೇರಿ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವುದು ನಿಜಕ್ಕೂ ಶಾಕಿಂಗ್ ವಿಷಯವಾಗಿದೆ. ಹಾಗಾದ್ರೆ ಈ ವರ್ಷ ದಾಖಲಾದ ಪ್ರಮುಖ ಅಪರಾಧ ಪ್ರಕರಣಗಳು ಯಾವುವು ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.


COMMERCIAL BREAK
SCROLL TO CONTINUE READING

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ : ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹಾಗೂ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಅಘಾತವಾಗಿದ್ದ ಕೇಸ್ ಅಂದ್ರೆ ಅದು ರೇಣುಕಾಸ್ವಾಮಿ ಕೊಲೆ ಕೇಸ್. ಗೆಳತಿ ಪವಿತ್ರಾಗೌಡಗೆ ಆಶ್ಲೀಲ ಸಂದೇಶ ಕಳುಹಿಸಿದ್ದ ರೇಣುಕಸ್ವಾಮಿಯನ್ನ ಅಪಹರಿಸಿ ಕರೆತಂದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪದ ಮೇಲೆ ನಟ ದರ್ಶನ್ ಸೇರಿ ಒಟ್ಟು 17 ಮಂದಿ ಆರೋಪಿಗಳನ್ನ ಕಳೆದ ಜೂನ್ ನಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದರು. ಬಹುತೇಕ ಕಳೆದ ಆರು ತಿಂಗಳಿಂದ ಆರೋಪಿಗಳು ಜೈಲು ವಾಸ ಅನುಭವಿಸಬೇಕಾಯಿತು. ಹತ್ಯೆಗೆ ಪೂರ್ವಾಸಂಚು, ಹತ್ಯೆ ಮಾಡಿದ ಪರಿ, ಕೃತ್ಯದ ಬಳಿಕ ಶವ ಸಾಗಾಟ ಹಾಗೂ ಪ್ರಕರಣದಿಂದ ತಪ್ಪಿಸೊಕೊಳ್ಳಲು ಆರೋಪಿಗಳು ಪ್ಲಾನ್ ಮಾಡಿದ್ದು ಸೇರಿ ಸಾವಿರಾರು ಪುಟಗಳ ದೋಷಾರೋಪಣೆ ಪಟ್ಟಿಯನ್ನ ತನಿಖಾಧಿಕಾರಿ ಚಂದನ್ ಕುಮಾರ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸದ್ಯ ನಟ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 17  ಮಂದಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.


ಇದನ್ನೂ ಓದಿ:ಜೆಡಿಎಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಸಂತಾಪ


ಎಚ್.ಡಿ.ರೇವಣ್ಣ ಹಾಗೂ ಮಕ್ಕಳ ಬಂಧನ : ರಾಜ್ಯಮಾತ್ರವಲ್ಲದೆ ದೇಶದೆಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ತಂದಿದ್ದ ಪ್ರಕರಣ ಅಂದ್ರೆ ಅದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ. ಲೋಕಸಭೆ ಚುನಾವಣೆಗೆ ಸಮೀಪಿಸುತ್ತಿದ್ದಂತೆ ಹಾಸನದಲ್ಲಿ ಸಿಕ್ಕ ಪೆನ್ ಡ್ರೈವ್ ನಲ್ಲಿ ಮಹಿಳೆಯೊಂದಿಗೆ ಪ್ರಜ್ವಲ್ ಇದ್ದಾನೆ ಎನ್ನಲಾದ ಆಶ್ಲೀಲ ವಿಡಿಯೊಗಳು ಹರಿದಾಡಿದ್ದವು. ಇದನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಸ್ಐಟಿ ರಚಿಸಿತ್ತು. ಹೊಳೆನರಸೀಪುರ, ಕೆ.ಅರ್.ನಗರ, ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿದ್ದವು. ಮಹಿಳೆ ಅಪಹರಿಸಿದ ಆರೋಪದಡಿ ಶಾಸಕ ಎಚ್.ಡಿ.ರೇವಣ್ಣ ಬಂಧನವಾಯಿತು. ಅಲ್ಲದೇ, ರೇವಣ್ಣ ಪತ್ನಿ ಭವಾನಿ ರೇವಣ್ಣ ಸಹ ಎಸ್ಐಟಿ ವಿಚಾರಣೆ ಎದುರಿಸಿದ್ದರು. ವಿದೇಶದಲ್ಲಿ ತಲೆಮರೆಸಿಕೊಂಡು ಪ್ರಜ್ವಲ್ ಭಾರತಕ್ಕೆ ಬರುತ್ತಿದ್ದಂತೆ ಆತನನ್ನ ಬಂಧಿಸಲಾಯಿತು. ಸದ್ಯ ಪ್ರಜ್ವಲ್ ಜಾಮೀನು ಸಿಗದ ಕಾರಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಮತ್ತೊಂದೆಡೆ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಅರೋಪದಡಿ ಪ್ರಜ್ವಲ್ ಸಹೋದರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನ ಸಿಐಡಿ ಬಂಧಿಸಿತ್ತು.


ವಾಲ್ಮೀಕಿ ಹಗರಣದಲ್ಲಿ ಬಂಧಿರಾದ ಮಾಜಿ ಸಚಿವ ಬಿ.ನಾಗೇಂದ್ರ : ಈ ವರ್ಷ ಅತೀ ಹೆಚ್ಚು ಸದ್ದು ಮಾಡಿದ ಪ್ರಕರಣ ಎಂದರೆ ಅದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ.  ಮಂಡಳಿಯ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ರಾಜ್ಯ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿತ್ತು. ಅಲ್ಲದೆ, ಮಾಜಿ ಸಚಿವ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಬೇಕಾಯಿತು. ಮನಿ ಲ್ಯಾಂಡರಿಂಗ್ ಕೇಸ್ ನಲ್ಲಿ ಇ.ಡಿ. ಅಧಿಕಾರಿಗಳು ನಾಗೇಂದ್ರರನ್ನು ಬಂಧಿಸಿದ್ದರು. ವಾಲ್ಮೀಕಿ ನಿಗಮದಲ್ಲಿನ 187 ಕೋಟಿ ಅವ್ಯವಹಾರಲ್ಲಿ ದುರ್ಬಳಕೆಯಾಗಿದೆ. ಪ್ರಕರಣ ಮಾಸ್ಟರ್ ಮೈಂಡ್ ನಾಗೇಂದ್ರ ಅಂತಾ ಗುರುತಿಸಿಕೊಂಡಿದ್ದರು. 2024ರ ಬಳ್ಳಾರಿ ಲೋಕಸಭಾ ಚುನಾವಣೆ ವೆಚ್ಚಕ್ಕಾಗಿ ವಾಲ್ಮೀಕಿ ನಿಗಮದ 20.19 ಕೋಟಿ ರೂಪಾಯಿ ಹಣವನ್ನು ನಾಗೇಂದ್ರ ದುರ್ಬಳಕೆ ಮಾಡಿಕೊಂಡಿದ್ದಾರೆ. ಚುನಾವಣಾ ಖರ್ಚಿನ ಜೊತೆಗೆ ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಇ.ಡಿ. ಉಲ್ಲೇಖಿಸಿದೆ. ಮತ್ತೊಂದೆಡೆ ಎಸ್ಐಟಿ ಅಧಿಕಾರಿಗಳು ನಿಗಮದ ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್, ಬ್ಯಾಂಕ್ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ನಿಗಮದ ಎಂ.ಡಿ. ಜೆ.ಜಿ. ಪದ್ಮನಾಭ, ಸಹಚರರಾದ ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್ ಸೇರಿ 10ಕ್ಕಿಂತ ಹೆಚ್ಚು ಮಂದಿ ಆರೋಪಿಗಳನ್ನ ಬಂಧಿಸಿದ್ದರು. ಅಲ್ಲದೇ, 12 ಕೋಟಿ ರೂ ಮೌಲ್ಯದ ಒಟ್ಟು 16 ಕೆ.ಜಿ ಚಿನ್ನ ಜಪ್ತಿ ಮಾಡಿದ್ದರು. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ದಾಖಲಾಗಿದ್ದ ಎಂಟು ಪ್ರಕರಣಗಳಲ್ಲಿ 3 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿವೆ.


ಇದನ್ನೂ ಓದಿ:ಯಶವಂತಪುರ ಮಾರುಕಟ್ಟೆ ಅಂಗಡಿ ಸ್ಥಳಾಂತರಕ್ಕೆ ಅಧಿಕಾರಿಗಳ ಹುನ್ನಾರ


ಶಾಸಕ ಮುನಿರತ್ನ ವಿರುದ್ಧ ದಾಖಲಾದ ಮೂರು ಪ್ರಕರಣ : ಇನ್ನೂ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿನಿಂದನೆ ಆರೋಪದಡಿ ವೈಯಾಲಿಕಾವಲ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು. ಕೇಸ್ ದಾಖಲಾಗುತ್ತಿದ್ದಂತೆ  ಪೊಲೀಸರು ಮುನಿರತ್ನನನ್ನ ಕೋಲಾರದಲ್ಲಿ ಬಂಧಿಸಿದ್ದರು. ಬಂಧನವಾಗಿ ಜೈಲುಪಾಲಾಗುತ್ತಿದ್ದಂತೆ ಹನಿಟ್ರ್ಯಾಪ್ ಮಾಡಿ ಆತ್ಯಾಚಾರ ಮಾಡಿರುವುದಾಗಿ ಆರೋಪಿಸಿ ಮುನಿರತ್ನ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ತನಿಖೆಗಾಗಿ ಸರ್ಕಾರವು ಸಿಐಡಿ ಅಪರಾಧ ವಿಭಾಗದ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಿತ್ತು. ತನಿಖೆಯಲ್ಲಿ ಹನಿಟ್ರ್ಯಾಪ್ ನೆರವು ನೀಡಿದ ಆರೋಪದಡಿ ಇನ್ ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿಯನ್ನ ಬಂಧಿಸಿದ್ದರು. ಸದ್ಯ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ.


ಪ್ರಾಸಿಕ್ಯೂಷನ್ ಅನುಮತಿ ಬೆನ್ನಲೇ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ : ಮೈಸೂರು ನಗರಾಭವೃದ್ಧಿ ಪ್ರಾಧಿಕಾರದಲ್ಲಿನ (ಮೂಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಾಹಂ  ಮುಖ್ಯಮಂತ್ರಿ ವಿರುದ್ದ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ನೀಡಿದ್ದರು. ದೂರಿಗೆ ಸ್ಪಂದಿಸಿದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ನೀಡಿದ್ದರು. ಇದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್  ಮೊರೆ ಹೋಗಿದ್ದರು. ಸುದೀರ್ಘ ವಿಚಾರಣೆ ನಡೆಸಿ ರಾಜ್ಯಪಾಲರ ಕ್ರಮವನ್ನ ಕೋರ್ಟ್ ಎತ್ತಿಹಿಡಿದಿತ್ತು. ತನಿಖೆಗೆ ಪೂರ್ವಾನುಮತಿ ದೊರೆಯುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಮೂಡಾ ಹಿಂದಿನ ಆಯುಕ್ತರು ಹಾಗೂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಮತ್ತೊಂದೆಡೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ಜಾರಿ ನಿರ್ದೇಶಾನಾಲಯ  ತನಿಖೆ ನಡೆಸುತ್ತಿದೆ.


ಇದನ್ನೂ ಓದಿ:ಮನಮೋಹನ್ ಸಿಂಗ್ ನಿಧನ: ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಮ್ ಇಂಡಿಯಾ


ವಿಧಾನಸೌಧದಲ್ಲೇ ಪಾಕ್ ಪರ ಜೈಕಾರ : ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಾಗ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪರ ಸಂಭ್ರಮಚರಣೆ ನಡೆದಿತ್ತು. ಈ  ವೇಳೆ ವಿಧಾನಸೌಧದಲ್ಲೇ ಪಾಕ್ ಪರ ಜೈಕಾರ ಕೂಗಿದ್ದ ಪ್ರಕರಣ ರಾಜಕೀಯ ಕೆಸೆರೆರೆಚಾಟಕ್ಕೆ ಕಾರಣವಾಯಿತು. ಘಟನೆ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದ ವಿಡಿಯೋ ಸ್ಯಾಂಪಲ್ ಗಳನ್ನ ಎಫ್ಎಸ್ಎಲ್ ತಜ್ಞರು ಪರಿಶೀಲಿಸಿದಾಗ ಪಾಕ್ ಪರ ಜೈಕಾರ ಕೂಗಿರುವುದು ಖಚಿತವಾಗಿತ್ತು. ಈ ಸಂಬಂಧ ಮೂವರನ್ನ ಬಂಧಿಸಲಾಗಿತ್ತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.