Leopard: ಪೊಲೀಸ್ ಠಾಣೆ ಹಿಂದೆ ಓಡಾಡಿದ ಚಿರತೆ, ಸ್ಥಳೀಯರಲ್ಲಿ ಆತಂಕ!

ತಕ್ಷಣವೇ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಆತಂಕದಲ್ಲಿರುವ ಸ್ಥಳೀಯ ಜನರು ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : May 8, 2022, 11:30 AM IST
  • ಕೊಪ್ಪಳ ಜಿಲ್ಲೆ ಪೊಲೀಸ್ ಠಾಣೆ ಹಿಂದೆ ಕಾಣಿಸಿಕೊಂಡ ಚಿರತೆ, ಸ್ಥಳೀಯರಲ್ಲಿ ಆತಂಕ
  • ಮುನಿರಾಬಾದ್‍ನ ಪೊಲೀಸ್ ಠಾಣೆ ಹಿಂದುಗಡೆ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆ
  • ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ ಸ್ಥಳೀಯ ಜನರು
Leopard: ಪೊಲೀಸ್ ಠಾಣೆ ಹಿಂದೆ ಓಡಾಡಿದ ಚಿರತೆ, ಸ್ಥಳೀಯರಲ್ಲಿ ಆತಂಕ! title=
ಪೊಲೀಸ್ ಠಾಣೆ ಹಿಂದೆ ಓಡಾಡಿದ ಚಿರತೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಪೊಲೀಸ್ ಠಾಣೆ ಹಿಂದುಗಡೆ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಕೊಪ್ಪಳದ ಮುನಿರಾಬಾದ್‍ನ ಪೊಲೀಸ್ ಠಾಣೆ ಹಿಂದುಗಡೆ ಚಿರತೆ ಓಡಾಡಿದೆ.

ಚಿರತೆ ಓಡಾಟದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ತುಂಗಭದ್ರಾ ಜಲಾಶಯದ ಪಕ್ಕದಲ್ಲಿರುವ ಮುನಿರಾಬಾದ್ ಪೊಲೀಸ್ ಠಾಣೆ ಹಿಂದುಗಡೆ ಚಿರತೆ ಕಾಣಿಸಿಕೊಂಡಿದೆ.

ಇದನ್ನೂಓದಿ: Pralhad Joshi : 'ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ'

ಜಲಾಶಯದ ಪಕ್ಕ ಚಿರತೆ ಓಡಾಡಿರುವ ದೃಶ್ಯನ್ನು ಸ್ಥಳೀಯರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಜನವಸತಿ ಪ್ರದೇಶದಲ್ಲಿ ಇದ್ದಕ್ಕಿದ್ದಂತೆಯೇ ಚಿರತೆ ಪ್ರತ್ಯೇಕ್ಷವಾಗಿರುವುದು ಸ್ಥಳೀಯಲ್ಲಿ ಆತಂಕ ಮೂಡಿಸಿದೆ.

ಕೊಪ್ಪಳ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಜಿಲ್ಲೆಯ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಚಿರತೆಗಳನ್ನು ಹಿಡಿದು ಕಾಡಿಗೆ ಬಿಡುವಂತೆ ಇಲ್ಲಿನ ಸ್ಥಳೀಯ ಜನರು ಅರಣ್ಯ ಇಲಾಖೆ ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದಾರೆ.  

ಇದನ್ನೂಓದಿ: Vegetables Price: ರಾಜ್ಯದ ಮಾರುಕಟ್ಟೆಯಲ್ಲಿ ತರಕಾರಿ ಬಲು ದುಬಾರಿ!

ಚಿರತೆ ಇದೇ ರೀತಿ ಜನವಸತಿ ಪ್ರದೇಶದಲ್ಲಿ ಓಡಾಡಿದರೆ ಮುಂದಿನ ದಿನಗಳಲ್ಲಿ ಜನರ ಪ್ರಾಣಕ್ಕೆ ಕುತ್ತು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ತಕ್ಷಣವೇ ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News