Road Accident Viral Video:  ಹಿಂಬದಿಯಿಂದ ಬಂದ ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿನ್ನೆ (21 ನವೆಂಬರ್, ಮಂಗಳವಾರದಂದು) ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ಬೆಳಗಲಿ ಕ್ರಾಸ್ ಬಳಿ ನಡೆದಿದೆ. 


COMMERCIAL BREAK
SCROLL TO CONTINUE READING

ಮೃತ ದುರ್ದೈವಿ ಹೆದ್ದಾರಿಯಲ್ಲಿ ರಸ್ತೆ ಕ್ರಾಸ್ ಮಾಡುವ ಸಲುವಾಗಿ ರಸ್ತೆ ಬದಿಗೆ ಬರುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಬೈಕ್ ನಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ರಸ್ತೆ ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 


Rain Alert: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಎಚ್ಚರಿಕೆ


ಇನ್ನು ರಸ್ತೆಯಲ್ಲಿ ವೇಗವಾಗಿ ಬಂದು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಅಪಘಾತದ ನಂತರ ಲಾರಿ ಸಮೇತ ಪರಾರಿಯಾಗಿದ್ದಾನೆ. ಮೃತ ಬೈಕ್ ಸವಾರನ್ನು ಮಹಮ್ಮದ್ ನವಾಜ್ (29) ಎಂದು ಗುರುತಿಸಲಾಗಿದ್ದು, ಈತ ಹುಬ್ಬಳ್ಳಿ ತಬೀಬ್ ಲ್ಯಾಂಡ್ ನಿವಾಸಿ ಎಂದು ತಿಳಿದುಬಂದಿದೆ.


ಇದನ್ನೂ ಓದಿ- ಕಾಂಗ್ರೆಸ್ ಪಕ್ಷ ಸೇರಿದ ಯು.ಬಿ. ಬಣಕಾರ್, ಶ್ರೀನಿವಾಸ್, ಮಲ್ಲಿಕಾರ್ಜುನ ರೋಣಿ


ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಲಾರಿ ಚಾಲಕನಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.