'ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ' ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ - ಸಿಎಂ ಸಿದ್ದರಾಮಯ್ಯ

CM Siddaramaiah: ಫೆಬ್ರವರಿ 17ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರ  ಹಾಕುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ..  

Written by - Savita M B | Last Updated : Feb 13, 2024, 05:16 PM IST
  • ವಿಧಾಸಸೌಧದ ಸಮ್ಮೇಳನದಲ್ಲಿ ಬಸವಣ್ಣ ಅವರ ಭಾವಚಿತ್ರ ಅನಾವಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ
  • ಫೆಬ್ರವರಿ 17ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಬೇಕು
  • ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ರಾಜ್ಯವಿಡೀ ಮೊಳಗಬೇಕು
'ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ' ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ - ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ವಿಧಾಸಸೌಧದ ಸಮ್ಮೇಳನದಲ್ಲಿ ಬಸವಣ್ಣ ಅವರ ಭಾವಚಿತ್ರ ಅನಾವಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು.. ಫೆಬ್ರವರಿ 17ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರ  ಮಾತ್ರವಲ್ಲ.. ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ರಾಜ್ಯವಿಡೀ ಮೊಳಗಬೇಕು... ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ಈ ಕಾರ್ಯ ನೇರವೇರಬೇಕು.. ರಾಜ್ಯದ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಬೇಕು ಮತ್ತು ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದಿದ್ದಾರೆ.. 

ಬಸವ ಜಯಂತಿಯನ್ನು ಎಲ್ಲರೂ ಆಚರಿಸಿ, ಬಸವ ಜಯಂತಿ ಆಚರಿಸಿ, ಹಣೆಬರಹ, ನನ್ನ ಕರ್ಮ ಎನ್ನುವುದು ಪುನ: ದಾರಿ ತಪ್ಪಿಸಿದಂತಾಗುತ್ತದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕೃತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ ಎಂದರು.

ಇದನ್ನೂ ಓದಿ-ನೀರಾವರಿ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬಿಸುವುದಕ್ಕೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ ಶಿವಕುಮಾರ್

ಸಮಾಜದಲ್ಲಿ ಒಳ್ಳೆಯ ಬದಲಾವಣೆ ತರುವ ಪ್ರಯತ್ನ ಮಾಡೋಣ:
ಈಗಾಗಲೇ ಶಿವಮೊಗ್ಗದಲ್ಲಿ ಹಳೇ ಜೈಲು ಆವರಣವನ್ನು ಅಲ್ಲಮಪ್ರಭು ನಾಮಕರಣ ಮಾಡಲಾಗಿದ್ದು.. ಬಿಜಾಪುರ ಮಹಿಳಾ ವಿಸ್ವವಿದ್ಯಾಲಯಕ್ಕೆ ಅಕ್ಕಮಹಹಾದೇವಿ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಿದ್ದು ಸಹ ನಮ್ಮ ಸರ್ಕಾರವೇ ಎಂದರು. ಈ ಎಲ್ಲ ಕಾರ್ಯಗಳು ಸಮಾಜದಲ್ಲಿ ಉತ್ತಮ ಬದಲಾವಣೆಗಳನ್ನು ತರಲು.. ಬಸವಾದಿ ಶರಣರ ವಚನಗಳು ಹಿಂದೆ, ಇಂದು ಹಾಗೂ ಮುಂದೆಯೂ ಪ್ರಸ್ತುತವಾಗಿರಲಿದೆ.  ಬಸವ ಜಯಂತಿಯ ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಸರ್ಕಾರದಲ್ಲಿ ಅನುದಾನದ ಕೊರತೆಯಿರುವುದಿಲ್ಲ ಎಂದು ತಿಳಿಸಿದ್ದಾರೆ.. ನಮ್ಮ ಕರ್ನಾಟಕ ಸರ್ಕಾರ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ.. ಬುದ್ಧ, ಬಸವ, ಮಹಾತ್ಮಾ ಗಾಂಧಿ, ಅಂಬೇಡ್ಕರ್ ಈ ಎಲ್ಲ ಮಹಾನ್‌ ವ್ಯಕ್ತಿಗಳು ಮನುಷ್ಯತ್ವದಿಂದ ಕೂಡಿದ ಸಮಾಜಿಕ ವ್ಯವಸ್ಥೆಯನ್ನು ಜಾರಿಗೊಳಿಸಲು ಬಯಸಿದರು.. ಜಾತೀಯತೆ, ಮೌಢ್ಯಗಳು ಸಮಾಜದಲ್ಲಿ ಪ್ರಚಲಿತದಲ್ಲಿವೆ.. ಹಾಗಾಗಿ ಅಸಮಾನತೆ ತೊಲಗಿ ಎಲ್ಲರೂ ಗೌರವದಿಂದ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕೆಂಬ ಉದ್ದೇಶದಿಂದ ಬಸವಣ್ಣನವರು ಶ್ರಮಿಸಿದರು.

ನುಡಿದಂತೆ ನಡೆದವರ ಕೀರ್ತಿ ವಿಶ್ವ ಗುರು ಬಸವಣ್ಣನವರಿಗೆ ಸಲ್ಲುತ್ತದೆ. ಅವರು ರಚಿಸಿದ ವಚನಗಳಲ್ಲಿ ವರ್ಗರಹಿತ, ಜಾತಿರಹಿತ, ಮೌಢ್ಯಗಳಿಲ್ಲದ ವೈಚಾರಿಕ ಸಮಾಜ ಸ್ಥಾಪನೆಯ ಆಶಯವಿತ್ತು.. ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ರಚಿಸಿ ಜಾಗೃತಿ ಮೂಡಿಸಿದರು. ಕಾಯಕ, ದಾಸೋಹವನ್ನು ಬೋಧಿಸಿದ ಬಸವಣ್ಣನವರು ಯಾರೂ ಕುಳಿತು ತಿನ್ನಬಾರದೆಂದು ಕಾಯಕವೇ ಕೈಲಾಸವೆಂದು ಕಾಯಕದಲ್ಲಿ ತೊಡಗಬೇಕೆಂದು ಪ್ರತಿಪಾದಿಸಿದರು. ಅಷ್ಟೇ ಅಲ್ಲದೇ ಅಧಿಕಾರ ಮತ್ತು ಸಂಪತ್ತು ಕೆಲವೇ ಜನರ ಕೈಯಲ್ಲಿ ಇರದೇ ಎಲ್ಲರಿಗೂ ಸಮಪಾಲು, ಸಮಬಾಳು ಎಂದು ಬಸವಾದಿ ಶರಣರು, ಅಂಬೇಡ್ಕರ್ ತಿಳಿಸಿದ್ದರು ಎಂದು ಸಿ ಎಂ ಸಿದ್ದರಾಮಯ್ಯ ಸ್ಮರಿಸಿದ್ದಾರೆ.. 

ಇದನ್ನೂ ಓದಿ-ಬಳ್ಳಾರಿ ಶಾಸಕ ಭರತ್‌ ನಾರಾ ರೆಡ್ಡಿ ಮೇಲೆ ED ರೇಡ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News