ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯಿಂದ ಇಂದು(ಜೂನ್ 18) ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10.30ಕ್ಕೆ ನಗರದ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ರ‍್ಯಾಲಿ ಆರಂಭವಾಗಲಿದ್ದು, ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ.


COMMERCIAL BREAK
SCROLL TO CONTINUE READING

‘ನಮ್ಮ ಅಸ್ಮಿತೆ ಮತ್ತು ಹೆಮ್ಮೆಯ ಸಂಕೇತಗಳಾಗಿರುವ ಮಹಾತ್ಮ ಗಾಂಧಿ, ಬುದ್ಧ, ಬಸವಣ್ಣ ಮತ್ತು ಕುವೆಂಪು, ಕನಕದಾಸ, ಟಿಪ್ಪು ಮತ್ತು ಅಲ್ಲಮರನ್ನು ಅವಮಾನಿಸಿ, ಅವರ ಕುರುಹುಗಳನ್ನು ನಾಶಪಡಿಸಲಾಗುತ್ತಿದೆ. ಫ್ಯಾಸಿಸ್ಟ್ ಪ್ರತಿಪಾದಕರ ಮತ್ತು ಮನುವಾದಿಗಳ ಮಾನವತಾ ವಿರೋಧಿ ಚಿಂತನೆಗಳನ್ನು ವೈಭವೀಕರಿಸಲಾಗುತ್ತಿದೆ ಎಂದು ವಿವಿಧ ಸಂಘಟನೆಗಳು ಹಾಗೂ ಪ್ರಗತಿಪರರಿಂದ ಬೃಹತ್ ಹೋರಾಟ ನಡೆಯಲಿದೆ.


ಇದನ್ನೂ ಓದಿ: ಕೈಗಾರಿಕಾ ಇಲಾಖೆಯ 2,689.51 ಕೋಟಿ ವೆಚ್ಚದ 81 ಹೊಸ ಯೋಜನೆಗಳಿಗೆ ಅನುಮೋದನೆ


ಕನ್ನಡಿಗರ ಹೆಮ್ಮೆಯನ್ನು ಪದೇ ಪದೇ ಕೆಣಕಿ ಅಣಕಿಸಲಾಗುತ್ತಿದೆ. ನಾವಿನ್ನೂ ಸುಮ್ಮನಿದ್ದರೆ ಉಳಿಗಾಲವಿಲ್ಲ. ಫ್ಯಾಸಿಸ್ಟ್ ಶಕ್ತಿಗಳ ಪಠ್ಯಪುಸ್ತಕಗಳ ಪರಿಷ್ಕರಣೆ ವಿರೋಧಿಸಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಮಿತಿ ಸದಸ್ಯರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.


ಪಠ್ಯಪುಸ್ತಕ ಪರಿಷ್ಕರಣೆ ವಿವಾದ ವಿಚಾರವಾಗಿ ಈಗಾಗಲೇ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪರಿಷ್ಕೃತ ಪಠ್ಯವನ್ನು ಕೈಬಿಟ್ಟು ಹಳೆಯ ಪಠ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ಬೋಧಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ?: ರಾಹುಲ್ ವಿರುದ್ಧ ಬಿಜೆಪಿ ಕಿಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.