Pejawara seer : 'ಯಾಕೆ ಬ್ರಾಹ್ಮಣರು ಸಿಎಂ ಆಗಬಾರದಾ? ಅವರು ಭಾರತದ ಪ್ರಜೆಗಳಲ್ಲವೆ?'

ಯಾಕೆ ಬ್ರಾಹ್ಮಣರು ಸಿಎಂ ಆಗಬಾರದಾ? ಅವರು ಭಾರತದ ಪ್ರಜೆಗಳಲ್ಲವೆ? ಸಂಖ್ಯಾ ಬಲ ಇಲ್ಲಾ, ಅಲ್ಪಸಂಖ್ಯಾತರು ಇದ್ದಾರೆ ಆದ್ರಿಂದ ಮಾತನಾಡ್ತಾರೆ ಎಂದು ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.  

Written by - Channabasava A Kashinakunti | Last Updated : Feb 6, 2023, 04:50 PM IST
  • ಯಾಕೆ ಬ್ರಾಹ್ಮಣರು ಸಿಎಂ ಆಗಬಾರದಾ?
  • ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರ
  • ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು
Pejawara seer : 'ಯಾಕೆ ಬ್ರಾಹ್ಮಣರು ಸಿಎಂ ಆಗಬಾರದಾ? ಅವರು ಭಾರತದ ಪ್ರಜೆಗಳಲ್ಲವೆ?' title=

ಮಂಡ್ಯ : ಯಾಕೆ ಬ್ರಾಹ್ಮಣರು ಸಿಎಂ ಆಗಬಾರದಾ? ಅವರು ಭಾರತದ ಪ್ರಜೆಗಳಲ್ಲವೆ? ಸಂಖ್ಯಾ ಬಲ ಇಲ್ಲಾ, ಅಲ್ಪಸಂಖ್ಯಾತರು ಇದ್ದಾರೆ ಆದ್ರಿಂದ ಮಾತನಾಡ್ತಾರೆ ಎಂದು ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಬ್ರಾಹ್ಮಣರ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.  

ಜಿಲ್ಲೆಯ ಮದ್ದೂರಿನಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿಬರ್ತಿದೆ. ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕೇಳಿಬರುತ್ತೆ. ಬ್ರಾಹ್ಮಣರು ಯಾರು ಧ್ವನಿ ಎತ್ತಿ ಮಾತನಾಡುವವರು ಇಲ್ಲಾ. ಸಂಖ್ಯಾ ಬಲ ಇಲ್ಲಾ, ಅಲ್ಪಸಂಖ್ಯಾತರು ಇದ್ದಾರೆ ಆದ್ರಿಂದ ಏನು ಮಾತನಾಡಿದ್ರು ನಡೆಯತ್ತೆ ಎಂದು ಮಾತನಾಡ್ತಾರೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಬಂದಿದ್ದಾರೆ? ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ? ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು.  ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು? ಅವರು ಭಾರತದ ಪ್ರಜೆಗಳಲ್ಲವೆ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ : "ಕರ್ನಾಟಕದಲ್ಲಿ 15000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ"

ಬ್ರಾಹ್ಮಣರಿಂದಲೆ ಗಾಂಧಿ ಹತ್ಯೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನು ದೂಷಿಸುವುದಾದರೆ. ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಸಾಮೂಹಿಕರಣ ಮಾಡ್ತಿಲ್ಲ? ಬ್ರಾಹ್ಮಣ ಸಮಾಜವನ್ನ ದೂರು ಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರ್ತಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದ್ರೆ. ಅನ್ಯಾಯವಾದಗ ಒಂದು ಧರ್ಮದ ವಿರುದ್ದ ಮತ್ತೊಂದು ಧರ್ಮ ಪುಟಿದೇಳಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ.ಯಾವ ಧರ್ಮದವ್ರಿಗೂ ಅನ್ಯಾಯ ಆಗಬಾರದು ಎಂದು ಗುಡುಗಿದ್ದಾರೆ.

ಇದನ್ನೂ ಓದಿ : ಟ್ರಾಫಿಕ್ ನಿಯಮ ಉಲ್ಲಂಘನೆ- ದಂಡ ಪಾವತಿಗೆ 50% ರಿಯಾಯಿತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News