ಬೆಂಗಳೂರು : ವಿಧಾನಸಭೆ ಸ್ಪೀಕರ್ ಆಗಿ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಸೋಮವಾರ ಕೆ.ಆರ್. ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದರು. ಭಾರತೀಯ ಜನತಾ ಪಕ್ಷದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕರ್ನಾಟಕ ವಿಧಾನಸಭಾ ಸ್ಪೀಕರ್ ಹುದ್ದೆಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು. 


ಸ್ಪೀಕರ್ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


ನೂತನ ಸ್ಪೀಕರ್ ಆಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆಡಳಿತ ಪಕ್ಷ ಹಾಗೂ ವಿಪಕ್ಷ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.