ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ಆಗಮಿಸಿ ಅಲ್ಲಿನ ಮೂಲ ಸೌಕರ್ಯವನ್ನು ವೀಕ್ಷಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಟ್ವೀಟ್‌ ಮಾಡಿ ಆಗ್ರಹಿಸಿದರು.


US midterm elections: ಅಮೇರಿಕಾದಲ್ಲಿ ಇತಿಹಾಸ ನಿರ್ಮಿಸಿದ ಭಾರತೀಯ ಮೂಲದ ಮಹಿಳೆ


COMMERCIAL BREAK
SCROLL TO CONTINUE READING

“ಒಂದು ಕಾಲದಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶವು ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶವೆಂಬ ಖ್ಯಾತಿಗೆ ಪಾತ್ರವಾಗಿತ್ತು. ಆದರೆ ಇಂದು ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಲ್ಲಿನ ರಸ್ತೆಗಳಲ್ಲಿ ಗುಂಡಿಗಳು ಮಾತ್ರವಲ್ಲದೇ ಮೃತ್ಯಕೂಪಗಳೇ ಸೃಷ್ಟಿಯಾಗಿವೆ. ಮೂಲಸೌಕರ್ಯಗಳಿಲ್ಲದೇ ಹಾಳುಕೊಂಪೆಯಾಗಿದೆ. ಆದ್ದರಿಂದ ಮೋದಿಯವರು ಇಲ್ಲಿಗೆ ಭೇಟಿ ನೀಡಬೇಕು. ಮೋದಿಯವರು ಭೇಟಿ ನೀಡುವ ಸ್ಥಳಗಳಲ್ಲಿ ಮಾತ್ರ ಸರ್ಕಾರ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ, ಮೋದಿಯವರು ಇಲ್ಲಿಗೆ ಭೇಟಿ ನೀಡಿದರೆ ಸಮಸ್ಯೆಗಳು ಬಗೆಹರಿಯಬಹುದು” ಎಂದು ಪೃಥ್ವಿ ರೆಡ್ಡಿ ಹೇಳಿದರು.


ಪೃಥ್ವಿ ರೆಡ್ಡಿ ಹೇಳಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.