ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಮಾಡಿಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಗೆ ಒಕ್ಕಲಿಗರ ಬೆಂಬಲ ದೊರೆತಿದೆ. ಈ ಕ್ಷೇತ್ರದಲ್ಲಿ ಒಕ್ಕಲಿಗರ ಬೆಂಬಲ ದೊರೆತಿರುವುದು ಮಾಜಿ ಸಚಿವ ಜಿ.ಟಿ. ದೇವೇಗೌಡ ಎದುರು ಸಿಎಂ ಜಯಗಳಿಸಲು ಸಹಕಾರಿಯಾಗಲಿದೆ.


COMMERCIAL BREAK
SCROLL TO CONTINUE READING

ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಒಕ್ಕಲಿಗ ಸಮಾಜದ ಕೆಲ ನಾಯಕರು ಚಾಮುಂಡೇಶ್ವರಿ ಜನತೆ ಎಂದಿಗೂ ಜಾತಿ ರಾಜಕೀಯ ಮಾಡಿಲ್ಲ. ಒಕ್ಕಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ನಿಲ್ಲುತ್ತಾರೆ ಎಂದು ಹೇಳಿದರು.


ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಕಣಕ್ಕಿಳಿಯಲಿದ್ದು ಸಿಎಂ ಸಿದ್ದರಾಮಯ್ಯಗೆ ಸೋಲು ಖಚಿತ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಒಕ್ಕಲಿಗರ ಬೆಂಬಲ ಸೂಚಿಸುವ ಸಭೆ ನಡೆದಿರುವುದು ಕುತೂಹಲಕಾರಿ ಸಂಗತಿಯಾಗಿದೆ.