ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಾಳೆ ಒಕ್ಕಲಿಗರ ಬೃಹತ್ ರ್ಯಾಲಿ

ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಒಕ್ಕಲಿಗರ ಸಂಘಗಳ ಒಕ್ಕೂಟ ತಿಳಿಸಿದ್ದು, ಒಕ್ಕಲಿಗರು, ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Updated: Sep 10, 2019 , 05:58 PM IST
ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಾಳೆ ಒಕ್ಕಲಿಗರ ಬೃಹತ್ ರ್ಯಾಲಿ

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನವನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ಒಕ್ಕಲಿಗರ ಸಂಘಟನೆಗಳು ಬೃಹತ್ ರ್ಯಾಲಿ ಹಮ್ಮಿಕೊಂಡಿವೆ.

ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಒಕ್ಕಲಿಗರ ಸಂಘಗಳ ಒಕ್ಕೂಟ ತಿಳಿಸಿದ್ದು, ಒಕ್ಕಲಿಗರು, ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಬಂಧಿಸಿದ ದಿನದಿಂದಲೂ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸಾಕಷ್ಟು ಮಂದಿ ಬಂಧನಕ್ಕೂ ಸಹ ಒಳಗಾಗಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಡಿಕೆಶಿ ಅವರನ್ನು ಬಂಧಿಸಿದೆ ಎಂದು ಕಿಡಿ ಕಾರಿದ್ದಾರೆ. 

ನಾಳಿನ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು, ಎಲ್ಲಾ ಒಕ್ಕಲಿಗ ಸಂಘ-ಸಂಸ್ಥೆಗಳು, ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು, ಕ್ರೈಸ್ತ ಸಂಘಟನೆಗಳು, ಮಹಿಳಾ ಕಾಂಗ್ರೆಸ್ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.