ಮತದಾರ ಪ್ರಭುಗಳೇ ನನ್ನ ಹೈಕಮಾಂಡ್ - ಪ್ರತಾಪ್ ರೆಡ್ಡಿ
ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಮತದಾರರನ್ನು ಸಂಪರ್ಕಿಸುವಂತಹ ಕಾರ್ಯ ಮಾಡುವ ಮೂಲಕ ಪಕ್ಷದ ಬಾವುಟಗಳನ್ನು ಹಿಡಿದು ಉಸಿ ಭರವಸೆ ನೀಡುತ್ತಿದ್ದಾರೆ. ಅಲ್ಲದೇ ಚುನಾವಣೆಯ ಬಳಿಕ ಕಾಣೆಯಾಗುವ ಮೂಲಕ ಮತದಾರರ ಸಮಸ್ಯೆಗೆ ಸ್ಪಂದಿಸುವ ಕಾರ್ಯಕೈಗೊಳ್ಳುವುದಿಲ್ಲ ಎಂದವರು ಆರೋಪಿಸಿದರು.
N Pratap Reddy: ಈಶಾನ್ಯ ಪದವೀಧರ ಕ್ಷೇತ್ರದ ಮತದಾರ ಪ್ರಭುಗಳೇ ನನ್ನ ಹೈಕಮಾಂಡ್. ಅವರ ಆಶಯದಂತೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪ್ ರೆಡ್ಡಿ (N Pratap Reddy) ತಿಳಿಸಿದರು.
ಬಳ್ಳಾರಿಯ ಕಂಪ್ಲಿ ಪಟ್ಟಣದಲ್ಲಿ ಗುರುವಾರ ಮತಯಾಚನೆ ವೇಳೆ ಮಾತನಾಡಿದ ಈಶಾನ್ಯ ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪ್ ರೆಡ್ಡಿ (Independent Candidate N Pratap Reddy) ಅವರು, 2018ರಲ್ಲಿ ನಾನು ನಿಮ್ಮ ಸಹಕಾರದಿಂದ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದೆ. ನನಗೆ ತಾವು ತಮ್ಮ ಅಮೂಲ್ಯ ಮತಗಳನ್ನು ನೀಡಿ ಬೆಂಬಲಿಸಿದ್ದಿರಿ. ಆದರೆ ಸಾವಿರಾರು ಸಂಖ್ಯೆಯಲ್ಲಿ ಮತಗಳು ತಿರಸ್ಕೃತಗೊಂಡ ಕಾರಣ ನಾನು ಪರಾಭವಗೊಂಡೆನು. ಆದರೂ ನಾನು ಈ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಪದವೀಧರರ ಶೈಕ್ಷಣಿಕ ಮತ್ತು ಸಾಮಾಜಿಕ ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವುದರ ಜೊತೆಗೆ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಕೈಗೊಳ್ಳುತ್ತ ಬಂದಿದ್ದೇನೆ ಎಂದರು.
ಇದನ್ನೂ ಓದಿ- Bengaluru Weather: ಬೆಂಗಳೂರಿನಲ್ಲಿಂದು ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ ಬಗ್ಗೆ ಐಎಂಡಿ ಎಚ್ಚರಿಕೆ
ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರು ಚುನಾವಣೆಯ (Election) ಸಂದರ್ಭದಲ್ಲಿ ಮಾತ್ರ ಮತದಾರರನ್ನು ಸಂಪರ್ಕಿಸುವಂತಹ ಕಾರ್ಯ ಮಾಡುವ ಮೂಲಕ ಪಕ್ಷದ ಬಾವುಟಗಳನ್ನು ಹಿಡಿದು ಉಸಿ ಭರವಸೆ ನೀಡುತ್ತಿದ್ದಾರೆ. ಅಲ್ಲದೇ ಚುನಾವಣೆಯ ಬಳಿಕ ಕಾಣೆಯಾಗುವ ಮೂಲಕ ಮತದಾರರ ಸಮಸ್ಯೆಗೆ ಸ್ಪಂದಿಸುವ ಕಾರ್ಯಕೈಗೊಳ್ಳುವುದಿಲ್ಲ ಎಂದವರು ಆರೋಪಿಸಿದರು.
ಇದನ್ನೂ ಓದಿ- ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಸರಿಯಾಗಿ ವಾದ ಮಂಡಿಸಿಲ್ಲ : ಆರ್.ಅಶೋಕ್
ಈ ವೇಳೆ ಈ ಬಾರಿಯ ಚುನಾವಣೆಯಲ್ಲಿ ತಾವು ನನಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಈ ಕ್ಷೇತ್ರದ ಶೈಕ್ಷಣಿಕ ಮತ್ತು ಔದ್ಯೋಗಿಕ ಸೇವೆಗೆ ಅವಕಾಶ ಕಲ್ಪಿಸಿ ಕೊಡಬೇಕಾಗಿ ಈಶಾನ್ಯ ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎನ್.ಪ್ರತಾಪ್ ರೆಡ್ಡಿ ಮತದಾರರಿಗೆ ಮನವಿ ಮಾಡಿಕೊಂಡರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.