ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಮನಗರದಲ್ಲಿ ಒಂದು ತಿಂಗಳು ಪ್ರಚಾರ ನಡೆಸಿದರೂ ಗೆಲ್ಲುವುದು ನಾನೇ ಎಂದು ಹೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಈ ರೀತಿಯ ಹೇಳಿಕೆ ನೀಡಬಾರದು ಎಂದು ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪಟ್ಟಿ ಬಿಡುಗಡೆ


ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟವಾದ ನಂತರ ಮೊದಲ ಬಾರಿಗೆ  ಚಾಮುಂಡೇಶ್ವರಿ ಕ್ಷೇತ್ರದಲ್ಲಿ  ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. "ರಾಮನಗರದಲ್ಲಿ ತಾವೇ ಗೆಲ್ಲೋದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಪ್ರಜಾಪ್ರಭುತ್ವದಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ. ಹಾಗಾದರೆ ವೀರಪ್ಪ ಮೊಯ್ಲಿ ವಿರುದ್ಧ ಕುಮಾರಸ್ವಾಮಿ ಸೋತಿದ್ದು ಯಾಕೆ? ಅನಿತಾ ಕುಮಾರಸ್ವಾಮಿಯನ್ನು ಯಾಕೆ ಗೆಲ್ಲಿಸಿಕೊಳ್ಳಲು ಆಗಲಿಲ್ಲ? ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದರು. 


ಸಿದ್ದರಾಮಯ್ಯ ಒಂದು ತಿಂಗಳು ರಾಮನಗರದಲ್ಲಿ ಪ್ರಚಾರ ಮಾಡಿದರೂ ಗೆಲುವು ನನ್ನದೇ: ಹೆಚ್ಡಿಡಿ


ಮುಂದುವರೆದು, ಜನರಿಗೆ ಯಾರಿಗೆ ಮತ ಹಾಕಬೇಕು? ಯಾರಿಗೆ ಹಾಕಬಾರದು, ಯಾರನ್ನು ಗೆಲ್ಲಿಸಬೇಕು, ಯಾರನ್ನು ಸೋಲಿಸಬೇಕು ಎಂಬುದು ತಿಳಿದಿದೆ. ಎಲ್ಲವನ್ನೂ ಮತದಾರರೇ ನಿರ್ಧರಿಸುತ್ತಾರೆ. ವೋಟುಗಳೇನು ಕುಮಾರಸ್ವಾಮಿ ಜೇಬಿನಲ್ಲಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು. 


ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ 16 ಗ್ರಾಮಗಳಲ್ಲಿ ತೆರೆದ ವಾಹನದಲ್ಲಿ ಸಿದ್ದರಾಮಯ್ಯ ರೋಡ್ ಶೋ ನಡೆಸಲಿದ್ದಾರೆ. ಅಲ್ಲದೆ, ಲಿಂಗಾಂಬುದಿ ಪಾಳ್ಯದಲ್ಲಿ ಭೋವಿ ಸಮಾಜದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.