Karnataka By-Election 2024: 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗದೆ ಸಂಜೆ 6 ಗಂಟೆಯವರೆಗೆ ವೋಟಿಂಗ್‌ಗೆ ಅವಕಾಶ ಮಾಡಿಕೊಡಲಾಗಿದ್ದು, ಯಾವುದೇ ಅಕ್ರಮ ನಡೆಯದಂತೆ ಎಲ್ಲೆಡೆ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಲ್ಲಿನಲ್ಲಿ ಈಗಾಗಲೆ ಮತದಾನ ಆರಂಭವಾಗಿದೆ, ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ವೋಟಿಂಗ್‌ ನಡೆಯಲಿದ್ದು, ಖಾಕಿ ಬಿಗಿ ಬಂದೋಬಸ್ತ್‌ ಮಧ್ಯೆ ಮತದಾನ ಆರಂಭವಾಗಿದೆ. ಇನ್ನೂ, ಈ ಚುಣಾವಣೆಯ ಫಲಿತಾಂಶ ನವೆಂಬರ್‌ 23ರಂದು ಹೊರಬೀಳಲಿದ್ದು, ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ, ಈ ಹಿನ್ನೆಲೆಯಲ್ಲಿ ರಾಜ್ಯದ ಚುಣಾವಣೆ ನಡೆಯುತ್ತಿರುವ ಈ ಭಾಗಗಳಲ್ಲಿ ಸಂಜೆ 6ರವರೆಗೆ ಮದ್ಯ ಮರಾಟಕ್ಕೂ ಬ್ರೇಕ್‌ ಹಾಕಲಾಗಿದೆ.


ಶಿಗ್ಗಾಂವಿಯಲ್ಲಿ 241 ಮತಗಟ್ಟೆ, ಸಂಡೂರಿನಲ್ಲಿ 253 ಮತಗಟ್ಟೆ, ಚನ್ನಪಟ್ಟಣದಲ್ಲಿ 276 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ 5 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ, ಈ ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದಾರೆ. 1 ಯುವ ಮತಗಟ್ಟೆ, 1 ಅಂಗವಿಕಲರು ನಿರ್ವಹಿಸುವ ಮತಗಟ್ಟೆಯನ್ನು ಕೂಡ ಸ್ಥಾಪನೆ ಮಾಡಲಾಗಿದೆ.


3 ಕ್ಷೇತ್ರದಲ್ಲಿ ಒಟ್ಟು 770 ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು, ಒಟ್ಟು 45 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸಂಡೂರು ಕ್ಷೇತ್ರದಲ್ಲಿ 6 ಅಭ್ಯರ್ಥಿಗಳು ಕಣಕ್ಕಿಳಿದಿದ್ದರೆ, ಶಿಗ್ಗಾವಿಯಲ್ಲಿ 8 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ, ಇನ್ನೂ ಚನ್ನಪಟ್ಟಣದಲ್ಲಿ ಅತಿಹೆಚ್ಚು ಅಂದರೆ 31 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧರವಾಗಲಿದೆ. 


ಇನ್ನೂ ಈ ಚುಣಾವಣೆ ಆಡಳಿತ ವಿಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ, ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ, ಕಾಂಗ್ರೆಸ್‌ ಮಧ್ಯೆ ಪೈಪೋಟಿ ನಡೆಯುತ್ತಿದ್ದು, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ v/s ನಿಖಿಲ್ ಕುಮಾರಸ್ವಾಮಿ, ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ v/s ಯಾಸಿರ್‌ಖಾನ್ ಪಠಾಣ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ v/s ಬಂಗಾರು ಹನುಮಂತು ಮಧ್ಯೆ ಕಾದಾಟ ಶುರುವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.