ಎಚ್ಚರ: ಸಾರ್ವಜನಿಕ ಸ್ಥಳಗಳಲ್ಲಿ ಈ ಕೆಲಸ ಮಾಡಿದರೆ ಸಾವಿರ ರೂ. ದಂಡ
ಕೋವಿಡ್-19 ಸೋಂಕು ತಡೆ ಹಾಗೂ ನಿಯಂತ್ರಣ ಉದ್ದೇಶಕ್ಕಾಗಿ ಲಾಕ್‍ಡೌನ್ ಜಾರಿಯಲ್ಲಿದೆ. ಅಲ್ಲದೆ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧ ವಿಧಿಸಿ ಆದೇಶಿಸಲಾಗಿದ್ದು, ಈ ಆದೇಶ ಉಲ್ಲಂಘಿಸುವವರ ವಿರುದ್ಧ ಗರಿಷ್ಠ 1000 ರೂ. ವರೆಗೆ ದಂಡ ಹಾಗೂ ಕಾನೂನು ರೀತ್ಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಎಚ್ಚರಿಕೆ ನೀಡಿದ್ದಾರೆ.
ಟಿಕೆಟ್ ರದ್ದಾದ ನಂತರ ಈ ಶುಲ್ಕ ಮರುಪಾವತಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಭಾರತೀಯ ರೈಲ್ವೆ
ಕೋವಿಡ್-19 (Covid-19) ಸೋಂಕು ತಡೆ ಹಾಗೂ ನಿಯಂತ್ರಣ ಉದ್ದೇಶಕ್ಕಾಗಿ ಲಾಕ್‍ಡೌನ್ (Lockdown) ಜಾರಿಯಲ್ಲಿದೆ. ಅಲ್ಲದೆ ಸೋಂಕು ಹರಡುವುದನ್ನು ತಡೆಗಟ್ಟಲು ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಇದರ ಜೊತೆಗೆ ಕರೋನಾವೈರಸ್ (Coronavirus) ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ಕೂಡ ನಿರ್ಬಂಧಿಸಲಾಗಿದೆ. ವಸತಿ ಸಮುಚ್ಛಯಗಳು, ಆಸ್ಪತ್ರೆ ಕಟ್ಟಡಗಳು, ಬಸ್ ಹಾಗೂ ರೈಲ್ವೆ ನಿಲ್ದಾಣಗಳು, ಹೋಟೆಲ್‍ಗಳು, ಸರ್ಕಾರಿ ಕಚೇರಿಗಳು, ನ್ಯಾಯಾಲಯ ಕಟ್ಟಡಗಳು, ಶಿಕ್ಷಣ ಸಂಸ್ಥೆ, ಶಾಲಾ ಕಾಲೇಜು ಕಟ್ಟಡಗಳು, ಗ್ರಂಥಾಲಯ, ಸಾರ್ವಜನಿಕ ಉದ್ಯಾನವನ ಸೇರಿದಂತೆ ಸಾರ್ವಜನಿಕರಿಂದ ಹೆಚ್ಚಾಗಿ ಬಳಸಲ್ಪಡುವ ಎಲ್ಲ ಸ್ಥಳಗಳಲ್ಲಿ ಉಗುಳುವುದನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
Covid-19 ಪರೀಕ್ಷೆಗಾಗಿ ಎರಡು ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ ಖರೀದಿ
ಈ ಆದೇಶ ಉಲ್ಲಂಘಿಸುವವರ ವಿರುದ್ಧ ಗರಿಷ್ಠ 1000 ರೂ. ವರೆಗೆ ದಂಡ ಹಾಗೂ ಕಾನೂನು ರೀತ್ಯ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.