ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 183 ಕೆರೆಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 32,514 ದಶಲಕ್ಷ ಲೀಟರ್‌ಗಳಾಗಿದೆ. ಏಪ್ರಿಲ್ 2025ರಲ್ಲಿ ಈ ಕೆರೆಗಳಲ್ಲಿ ಕೇವಲ 10,595 ದಶಲಕ್ಷ ಲೀಟರ್ ನೀರು ಸಂಗ್ರಹವಾಗಿದ್ದು, ಕೇವಲ 3 ಕೆರೆಗಳು ಮಾತ್ರ ಪೂರ್ಣ ಪ್ರಮಾಣದಲ್ಲಿ ತುಂಬಿದ್ದವು. ಸುಮಾರು 63 ಕೆರೆಗಳು ಒಣಗುವ ಹಂತದಲ್ಲಿದ್ದವು. ಆದರೆ, ಇತ್ತೀಚಿನ ಮಳೆಯಿಂದಾಗಿ ಕೆರೆಗಳಲ್ಲಿ ಒಟ್ಟು 26,056 ದಶಲಕ್ಷ ಲೀಟರ್ ನೀರು ಸಂಗ್ರಹವಾಗಿದ್ದು, ಏಪ್ರಿಲ್‌ಗೆ ಹೋಲಿಸಿದರೆ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಇದನ್ನೂ ಓದಿ: ಸಚಿವ ಜಿ.ಪರಮೇಶ್ವರ್ ಒಡೆತನದ ಕಾಲೇಜಿನ ಮೇಲೆ ಇಡಿ ದಾಳಿ; ತುಮಕೂರಿನ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯಲ್ಲಿ ದಾಖಲೆ ಪರಿಶೀಲನೆ!!
ತುಂಬಿರುವ ಕೆರೆಗಳ ಸುತ್ತಮುತ್ತ ಮತ್ತು ಕಾಲುವೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕೆರೆಗಳಿಗೆ ನೀರು ಹರಿದು ಹೋಗುವ ಕಾಲುವೆಗಳಲ್ಲಿ ಕಸ, ಕಡ್ಡಿಗಳು, ಪ್ಲಾಸ್ಟಿಕ್ ಮತ್ತು ಇತರ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸ್ವಚ್ಛತಾ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.
ಈ ಭಾರೀ ಮಳೆಯಿಂದ ಬೆಂಗಳೂರಿನ ಕೆರೆಗಳು ಪುನಶ್ಚೇತನಗೊಂಡಿದ್ದು, ನಗರದ ಭೂಗತ ಜಲಮಟ್ಟ ಸುಧಾರಣೆಗೆ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









