ಚಿಕ್ಕಮಗಳೂರು: ಮಲೆನಾಡಿನಲ್ಲಿ ಹನಿಹನಿ ನೀರಿಗೂ ಹಾಹಾಕಾರ ಎದುರಾಗಿದೆ. ಸಬಿಸಿಲಿನ ತಾಪಕ್ಕೆ ನೀರಿನ ಮೂಲಗಳೇ ಬರಿದಾಗಿವೆ. ಗ್ರಾಮದಲ್ಲಿ ನೀರಿಗೆ ಸಂಕಷ್ಟ ಬಂದಿದೆ. ನೀರಿಗಾಗಿ ಮಲೆನಾಡಿನ ನೂರಾರು ಗ್ರಾಮಸ್ಥರು ಪರದಾಡುವಂತಾಗಿದೆ. 


COMMERCIAL BREAK
SCROLL TO CONTINUE READING

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೇಸಿಗೆ ಆರಂಭಕ್ಕೂ ಮುನ್ನವೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಅದರಲ್ಲೂ ಪ್ರತಿ ವರ್ಷ ಅತಿವೃಷ್ಟಿಗೆ ಒಳಗಾಗಿ ಸಂಕಷ್ಟಕ್ಕೆ ಒಳಗಾಗುತ್ತಿದ್ದ ಕಳಸ ತಾಲೂಕಿನಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆಯಾಗದ ಹಿನ್ನೆಲೆಯಲ್ಲಿ ನದಿ, ಹಳ್ಳ-ಕೊಳ್ಳ ಬಾವಿ ಸೇರಿದಂತಹ ಜಲ ಮೂಲಗಳು ಬತ್ತಿ ಹೋಗಿದ್ದು ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ. 


ಇದನ್ನೂ ಓದಿ: ಬೆಂಗಳೂರಿನಲ್ಲಿ ನಿನ್ನೆ ನಡೆದ ಸ್ಪೋಟ ಸರಣಿ ಸ್ಫೋಟದ ಪ್ರಯೋಗಾರ್ಥ ತಯಾರಿಯೇ ?- ಸಿ.ಟಿ.ರವಿ ಅನುಮಾನ 


ಬಿಸಿಲ ಝಳದಿಂದಾಗಿ ಕಳೆದೊಂದು ತಿಂಗಳಿನಿಂದ ಜಲಮೂಲಗಳೆಲ್ಲ ಸಂಪೂರ್ಣವಾಗಿ ಬತ್ತಿ ಹೋಗಿವೆ. ಮಲೆನಾಡು ಭಾಗದ ಜನರು ನೀರನ್ನು ಬೇರೆ ಕಡೆಯಿಂದ ತಂದು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯಿತಿಯ ತನೂಡಿ ಗ್ರಾಮದ ಆಳುಗೋಡಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. 


ಕುಡಿಯುವ ನೀರಿಗೆ ಶಾಶ್ವತವಾದ ವ್ಯವಸ್ಥೆಯನ್ನ ಕಲ್ಪಿಸುವಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗೆ ಹಲವಾರು ಬಾರಿ ಮನವಿ ಮಾಡಿದ್ರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ. ಬೇಸಿಗೆ ಆರಂಭವಾಗಿ ಒಂದು ತಿಂಗಳು ಕಳೆಯುವುದರೊಳಗೇ ಈ ರೀತಿಯಾದರೆ ಮುಂಬರುವ ದಿನಗಳಲ್ಲಿ ಎದುರಾಗುವ ಭೀಕರ ಬಿಸಿಲ ಝಳಕ್ಕೆ ಇನ್ನೇನು ಅನುಭವಿಸಬೇಕಾಗುತ್ತದೆ ಎಂದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.


ಇದನ್ನೂ ಓದಿ: ರಾಮೇಶ್ವರಕೆಫೆ ಸ್ಪೋಟ ಪ್ರಕರಣ: ಆರೋಪಿ ಪತ್ತೆಗೆ ತನಿಖೆ ಚುರುಕು-ಸಿಎಂ ಸಿದ್ದರಾಮಯ್ಯ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.