ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಘಟನೆ ಸಂಭವಿಸಿದ ಕೂಡಲೇ ಕರ್ನಾಟಕ ಸರ್ಕಾರವು ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಸಿಎಂ ಸಿದ್ದರಾಮಯ್ಯನವರು ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ. ಇದರೊಂದಿಗೆ ರಾಜ್ಯದ ಕೈಗಾರಿಕೋದ್ಯಮಿಗಳು, ಖಾಸಗಿ ಸಂಘ ಸಂಸ್ಥೆಗಳೂ ಸಹ ವಿವಿಧ ರೂಪದಲ್ಲಿ ನೆರವಾಗಲು ಮುಂದಾಗಿವೆ.


COMMERCIAL BREAK
SCROLL TO CONTINUE READING

ಮೈಸೂರು ಜಿಲ್ಲಾಡಳಿತವು ವೈದ್ಯರ ತಂಡದೊಂದಿಗೆ 15 ಫ್ರೀಜರ್‌ ಬಾಕ್ಸ್‌ಗಳು, ನಾಲ್ಕು ಟ್ರಾಕ್ಟರ್‌ ಮೌಂಟೆಡ್‌ ಕಂಪ್ರೆಸರ್‌ ಮತ್ತು ಜಾಕ್‌ ಹ್ಯಾಮರ್‌, 500 ಬಾಡಿ ಬ್ಯಾಗ್‌ಗಳು, ತುರ್ತು ಸಂದರ್ಭಗಳಲ್ಲಿ ಬಳಸುವ 15 ದೀಪಗಳ ವ್ಯವಸ್ಥೆ, 40 ಸ್ಟ್ರೆಚರ್‌ಗಳು, 288 ಗಮ್‌ಬೂಟ್‌ಗಳು, 5 ಸ್ಟೀಲ್‌ ಕಟ್ಟರ್‌ಗಳು, 10 ಗ್ಯಾಸ್‌ ಕಟ್ಟರ್‌ಗಳು, 2040 ನ್ಯಾಪ್‌ಕಿನ್‌ಗಳು, 1000 ಗ್ಲೋವ್‌ಗಳು, 2050 ಮಾಸ್ಕ್‌ಗಳು, 1000 ಬಾಟಲ್‌ ಸ್ಯಾನಿಟೈಸರ್‌ಗಳು ಹಾಗೂ ಆರೋಗ್ಯ ಇಲಾಖೆಯ ಔ಼ಷಧಿಗಳನ್ನು ಒದಗಿಸಿದೆ.


ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ & ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್‌ ವಾಗ್ದಾಳಿ!


ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (KIAL) ವತಿಯಿಂದ 250MLನ 1008 ನೀರಿನ ಬಾಟಲ್‌ಗಳು, 100 ರೇನ್‌ಕೋಟ್‌ಗಳು, 500 ಬಾಟಲ್‌ ಸ್ಯಾನಿಟೈಸರ್‌ಗಳು, 15 ಟೆಂಟ್‌ಗಳು, 1000 ಪಿಪಿಇ ಕಿಟ್‌ಗಳು, 5000 ಗ್ಲೋವ್‌ಗಳು, 3000 3- ಪ್ಲೈ ಮಾಸ್ಕ್‌ಗಳು ಹಾಗೂ 8000 N-95 ಮಾಸ್ಕ್‌ಗಳನ್ನು ಕಳುಹಿಸಲಾಗಿದೆ. ವೋಲ್ವೋ ಸಂಸ್ಥೆಯಿಂದ 2000 ಪ್ಯಾಕ್‌ ಸ್ಯಾನಿಟರಿ ಪ್ಯಾಡ್‌ಗಳು, 100 PPE ಕಿಟ್‌ಗಳು ಹಾಗೂ ಎರಡು ಟ್ರಕ್‌ಗಳನ್ನು ಒದಗಿಸಲಾಗಿದೆ.


ಎಲೆಕ್ಟ್ರಾನಿಕ್‌ ಸಿಟಿ ಕೈಗಾರಿಕಾ ಸಂಘ(ELCIA)ದ ಸದಸ್ಯ ಸಂಸ್ಥೆಗಳು ಮತ್ತು ಪ್ರಣವ್‌ ಫೌಂಡೇಷನ್‌ ವತಿಯಿಂದ 40 ಸ್ಟ್ರೆಚರ್‌ಗಳು, 250 ಬಾಡಿ ಬ್ಯಾಗ್‌ಗಳು, 1000 N-95 ಮಾಸ್ಕ್‌ಗಳು, 500 ಬಾಟಲ್‌ ಸ್ಯಾನಿಟೈಸರ್‌ಗಳು, 1000 ಗ್ಲೋವ್‌ಗಳು ಹಾಗೂ ಒಂದು ಟ್ರಕ್‌ ಒದಗಿಸಲಾಗಿದೆ. ಬಯೋಕಾನ್‌ ಮತ್ತು ಭಾಗೀದಾರ ಸಂಸ್ಥೆಗಳಾದ ನಾರಾಯಣ ಹೆಲ್ತ್‌ ಮತ್ತು ಸಿಂಜೀನ್‌ ಸಂಸ್ಥೆಗಳಿಂದ 2200 ಮಾಸ್ಕ್‌ಗಳು, 100 ಉತ್ತಮ ಗುಣಮಟ್ಟದ ರೇನ್‌ ಕೋಟ್‌ಗಳು, 400 ಲೀಟರ್‌ ಸ್ಯಾನಿಟೈಸರ್‌, 5 ಕಾರ್ಟನ್‌ಗಳಷ್ಟು ಬೆಡ್‌ಶೀಟ್‌ ಮತ್ತು ಬಟ್ಟೆ ಹಾಗೂ 250 ಪಿಪಿಇ ಕಿಟ್‌ಗಳನ್ನು ಕಳುಹಿಸಲಾಗಿದೆ. 


ಇದನ್ನೂ ಓದಿ: ಡಿ ದೇವರಾಜು ಅರಸು ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ


ಆಶಯ ಟ್ರಸ್ಟ್ ಹಾಗೂ ಉತ್ತಿಷ್ಠ ಸ್ವಯಂ ಸೇವಾ ಸಂಸ್ಥೆಯ ವತಿಯಿಂದ 1000 ಬ್ಲಾಂಕೆಟ್‌ ಮತ್ತು ಟಾರ್ಪಾಲಿನ್‌ಗಳು ಹಾಗೂ ಎರಡು ಅಂಬ್ಯುಲೆನ್ಸ್‌ಗಳನ್ನು ಒದಗಿಸಲಾಗಿದೆ. ಇದಲ್ಲದೆ 25 ಲಕ್ಷ ರೂ. ಆರ್ಥಿಕ ನೆರವು ಸಹ ಒದಗಿಸಿದ್ದಾರೆ. ವಯನಾಡಿಗೆ ಪರಿಹಾರ ಸಾಮಗ್ರಿಗಳು, ವೈದ್ಯಕೀಯ ಸಲಕರಣೆಗಳು ಮತ್ತಿತರ ನೆರವು ಒದಗಿಸಿ ಮಾನವೀಯತೆ ಮೆರೆದ ಎಲ್ಲಾ ಸಂಸ್ಥೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿನಂದನೆ ಸಲ್ಲಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.