ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ - ಸಚಿವ ರಮೇಶ್ ಜಾರಕಿಹೊಳಿ

ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ- ರಮೇಶ್ ಜಾರಕಿಹೊಳಿ

Last Updated : Oct 4, 2020, 03:55 PM IST
  • ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧಾರಕ್ಕೆ ನಾವು ಬದ್ಧ
  • ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿ
  • ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ
ಸಂಪುಟ ವಿಸ್ತರಣೆ ; ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ - ಸಚಿವ ರಮೇಶ್ ಜಾರಕಿಹೊಳಿ title=
File Image

ಬೆಳಗಾವಿ: ಶಾಸಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi)ಯವರು ಹೇಳಿದ್ದಾರೆ. 

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ

ಹೊಸ ಮುಖಗಳಿಗೆ ದಾರಿ ಮಾಡಿಕೊಡುವ ಸಲುವಾಗಿ ಸಂಪುಟದ ಕೆಲವು ಮಂತ್ರಿಗಳನ್ನು, ವಿಶೇಷವಾಗಿ ಬೆಳಗಾವಿ (Belagavi) ಜಿಲ್ಲೆಯ ಸಚಿವರನ್ನು ಕೈಬಿಡಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿ ಜಿಲ್ಲೆಯ ಯಾವುದೇ ಸಚಿವರ ಕೈಬಿಟ್ಟರೂ ಕೂಡ ಇದಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ಹೇಳಿದ್ದಾರೆ. 

ಸಂಪುಟ ವಿಸ್ತರಣೆ (Cabinet expansion) ಅಥವಾ ಪುನಾರಚನೆ ಕುರಿತು ಪಕ್ಷದ ನಾಯಕತ್ವ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. 

ರಾಗಿಣಿ ದ್ವಿವೇದಿ 'ಡ್ರಗ್ಸ್ ಹುಡುಗಿ' ಅಂತಾ ಗೊತ್ತಿರಲಿಲ್ಲ: ರಮೇಶ್ ಜಾರಕಿಹೊಳಿ‌

ಪಕ್ಷದಲ್ಲಿ ಸಂಭವಿಸಲಿರುವ ಬಿರುಕುಗಳನ್ನು ತಪ್ಪಿಸಲು ಪಕ್ಷದ ನಾಯಕತ್ವವು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸಲು ಪಕ್ಷದ ನಾಯಕತ್ವ ನಿರ್ಧಾರ ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆ ಎಂದು ಜಾರಕಿಹೊಳಿಯವರು ಹೇಳಿದ್ದಾರೆ.

Trending News