ಅನರ್ಹತೆಗೊಳಿಸಿ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ: ಹೆಚ್. ವಿಶ್ವನಾಥ್

ಶಾಸಕರ ಅನರ್ಹತೆಯ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ- ಹೆಚ್. ವಿಶ್ವನಾಥ್

Updated: Jul 26, 2019 , 10:53 AM IST
ಅನರ್ಹತೆಗೊಳಿಸಿ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ: ಹೆಚ್. ವಿಶ್ವನಾಥ್
File Image

ಬೆಂಗಳೂರು: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ರಾಣಿಬೆನ್ನೂರು ಶಾಸಕ ಆರ್.ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಗುರುವಾರ ತೀರ್ಪು ನೀಡಿದ್ದಾರೆ.

ಮೂವರು ಶಾಸಕರನ್ನು ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿ ಬೇರೆಡೆ ಬೀಡುಬಿಟ್ಟಿರುವ ಬಂಡಾಯ ಶಾಸಕರು ಮತ್ತೆ ವಾಪಸ್ ಬರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. 

ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿರುವ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರಲ್ಲಿ ಒಬ್ಬರಾದ ಹೆಚ್. ವಿಶ್ವನಾಥ್, ಅನರ್ಹಗೊಳಿಸುವ ಮೂಲಕ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ. ಮೂವರು ಶಾಸಕರನ್ನು ಅನರ್ಹಗೊಳಿಸುವ ಮೂಲಕ ತಮ್ಮನ್ನು ಬೆದರಿಸಿ ರಾಜೀನಾಮೆ ವಾಪಸ್ ಪಡೆದುಕೊಳ್ಳುವಂತೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

ನಾವೆಲ್ಲರೂ ಒಟ್ಟಾಗಿ ರಾಜೀನಾಮೆ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಅನರ್ಹತೆಗೆ ಹೆದರಿ ವಾಪಸ್ ಬರಲು ನಾವೇನೂ ಕಾಲೇಜಿನಲ್ಲಿ ಓದುತ್ತಿರುವ ಹುಡುಗರಲ್ಲ. ನಾವೆಲ್ಲರೂ ಸಾಕಷ್ಟು ಅನುಭವಿದಲಿಗ್ಗೆವೆ. ರಾಜಕೀಯದಲ್ಲಿ ಇಂತಹ ಅದೆಷ್ಟೋ ಸನ್ನಿವೇಶಗಳನ್ನು ಕಂಡಿದ್ದೇವೆ. ಶಾಸಕರ ಅನರ್ಹತೆಯ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ಜೆಡಿಎಸ್ ಶಾಸಕ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.