ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯವನ್ನಲ್ಲ- ಎಂ.ಬಿ. ಪಾಟೀಲ್

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದೂ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಮಾಡಿಲ್ಲ- ಎಂ.ಬಿ. ಪಾಟೀಲ್

Last Updated : Jul 31, 2018, 03:53 PM IST
ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯವನ್ನಲ್ಲ- ಎಂ.ಬಿ. ಪಾಟೀಲ್ title=

ಬೆಂಗಳೂರು: ನಾವು ಎಂದಿಗೂ ಪ್ರತ್ಯೇಕ ರಾಜ್ಯ ಬಯಸಿದವರಲ್ಲ. ಅಖಂಡ ಕರ್ನಾಟಕ ನಮ್ಮ ಗುರಿ. ನಾವು ಅಭಿವೃದ್ಧಿಯನ್ನು ಬಯಸುತ್ತೇವೆ ಹೊರತು ಪ್ರತ್ಯೇಕ ರಾಜ್ಯವನ್ನಲ್ಲ ಎಂದು ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇದೀಗ ಪ್ರತ್ಯೇಕ ಉತ್ತರ ಕರ್ನಾಟಕ ವಿಚಾರದಲ್ಲಿ ಪಕ್ಷದ ಪರ ಬ್ಯಾಟಿಂಗ್ ಮಾಡಿದ್ದು, ಉತ್ತರ ಕರ್ನಾಟಕದ ಮಂದಿ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಈ ಭಾಗದ ಜನರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದೂ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ತಾರತಮ್ಯ ಮಾಡಿಲ್ಲ. ಕುಮಾರಸ್ವಾಮಿಯವರೂ ಮಾಡಲ್ಲ ಅನ್ನೋ ನಂಬಿಕೆ ಇದೆ ಎಂದಿದ್ದಾರೆ. 

ರಾಜ್ಯ ಇಬ್ಬಾಗದ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಬಾರದು ಎಂದು ಎಂ.ಬಿ. ಪಾಟೀಲ್ ಬಿಜೆಪಿಗೆ ಟಾಂಗ್ ನೀಡಿದರು.

Trending News