ಮೈಸೂರು: ಮೈಸೂರು ಮಹಾನಗರ ಪಾಲಿಕೆಯಾ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವುದರಿಂದ ನಮಗೂ ಕೆಲವು ಕಟ್ಟುಪಾಡುಗಳಿವೆ. ಹಾಗಾಗಿ ನಾವು ಅವುಗಳನ್ನು ಪಾಲಿಸಬೇಕಾಗುತ್ತದೆ. ಈಗಾಗಲೇ ಅಧಿಕಾರ ಹಂಚಿಕೆ ಬಗ್ಗೆ ಜೆಡಿಎಸ್-ಕಾಂಗ್ರೆಸ್ ನಡುವೆ ಮಾತುಕತೆ ನಡೆದಿದ್ದು, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಸಾರಾ ಮಹೇಶ್ ಹೇಳಿದರು. 


ಮುಂದುವರೆದು ಮಾತನಾಡಿದ ಅವರು, ಇಂದು ಸಂಜೆ ವೇಳೆಗೆ ಮೇಯರ್, ಉಪಮೇಯರ್ ಆಯ್ಕೆ ಅಂತಿಮವಾಗಲಿದೆ. ಮೊದಲು ಮೇಯರ್ ಆದವರಿಗೆ 2 ವರ್ಷ, ಎರಡನೇ ಭಾರಿ ಮೇಯರ್ ಆದವರಿಗೆ 3 ವರ್ಷ ಅಧಿಕಾರ ಕೊಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.