ಕೊಟ್ಟ ಮಾತಿನಂತೆ PTCL ಕಾಯ್ದೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿದ್ದರಾಮಯ್ಯ

PTCL Act: ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Written by - Puttaraj K Alur | Last Updated : Jul 17, 2023, 01:37 PM IST
  • ದಲಿತರಿಗೆ ಭೂಮಿ ಪರಬಾರೆ ಆಗಲೇಬೇಕು ಎನ್ನುವುದರಲ್ಲಿ ಯಾವುದೇ ರಾಜಿ ಇಲ್ಲ
  • ಮೊದಲ ಅಧಿವೇಶನದಲ್ಲೇ ಕಾಯ್ದೆಗೆ ತಿದ್ದುಪಡಿ ತರುವ ಸಂಕಲ್ಪ ನಮ್ಮದಾಗಿದೆ
  • ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, PTCL ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು
ಕೊಟ್ಟ ಮಾತಿನಂತೆ PTCL ಕಾಯ್ದೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿದ್ದರಾಮಯ್ಯ title=
ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ವಿಷಯದಲ್ಲಿ ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಯ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯನವರು ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞ ರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಇದನ್ನೂ ಓದಿ: ನಾಳೆ ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾಘಟಬಂದನ್‌ ಸಭೆ

‘ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಇಂದು ಸಭೆ ಕರೆಯಲಾಗಿದೆ’ ಎಂದು ಸಿದ್ದರಾಮಯ್ಯ ತಿಳಿಸಿದರು.

‘ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು. ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ. ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ: ರೈತರ ಜಮೀನಿನಲ್ಲಿ ಬಿಯರ್ ಬಾಟಲಿ ಸದ್ದು, ಬೆಳೆಗೆ ಕಾಡುತ್ತಿವೆ ಚಿಗರಿ

ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡರ ಸೇರಿದಂತೆ ಸಚಿವರಾದ ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್.ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ ಸರ್ಕಾರದ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News