ಮುಂಬೈ: ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಟಿ. ಸೋಮಶೇಖರ್ ಮುಂಬೈನಲ್ಲಿ ಸುದ್ದಿ ಸಂಸ್ಥೆ ಎಎನ್ಐಗೆ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆಯೇ ಹೊರತು, ಪಕ್ಷಕ್ಕಲ್ಲ ಎಂದು ತಿಳಿಸಿರುವ ಎಂ.ಟಿ. ಸೋಮಶೇಖರ್, ನಮ್ಮ ರಾಜೀನಾಮೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.



ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಮೈತ್ರಿ ಸರ್ಕಾರವನ್ನು ರಾಜ್ಯದ ಜನತೆ ವಿರೋಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ನಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ನಮಗೆ ಯಾವುದೇ ಮಂತ್ರಿ ಪದವಿಯ ಅಪೇಕ್ಷೆ ಇಲ್ಲ ಎಂದು ಸೋಮಶೇಖರ್ ತಿಳಿಸಿದರು.