ಮುಂದಿನ ದಿನಗಳಲ್ಲಿ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೂ ಉಚಿತ ಪಾಸ್ ನೀಡುವ ಚಿಂತನೆ- ಡಿಸಿಎಂ

ಮುಂದಿನ ದಿನಗಳಲ್ಲಿ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ-‌ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

Last Updated : Jul 24, 2018, 03:26 PM IST
ಮುಂದಿನ ದಿನಗಳಲ್ಲಿ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೂ ಉಚಿತ ಪಾಸ್ ನೀಡುವ ಚಿಂತನೆ- ಡಿಸಿಎಂ title=

ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಸಿಎಂ ಹೇಳಿಕೆ ಕುರಿತು ಚಿತ್ರದುರ್ಗದಲ್ಲಿ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಮೊದಲ ಹಂತದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ಪಾಸ್ ವಿತರಿಸುತ್ತೇವೆ,  ಮುಂದಿನ ದಿನಗಳಲ್ಲಿ ಖಾಸಗಿ ಶಾಲೆ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಸದ್ಯದಲ್ಲೇ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕುಸಿದು ಬೀಳಲಿದೆ. ಮೈತ್ರಿ ಧರ್ಮ ಪಾಲಿಸದ ಸರ್ಕಾರದ ಕಾರ್ಯವೈಖರಿ ನೋಡಿದರೆ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಕೆ.ಎನ್ ರಾಜಣ್ಣ ಸರ್ಕಾರದ ಭವಿಷ್ಯ ಕುರಿತ ಹೇಳಿಕೆ ಅವರ ವೈಯಕ್ತಿಕವಾದದ್ದು ಎಂದ ಪರಮೇಶ್ವರ್ ನಮ್ಮ ಸರ್ಕಾರ ಐದು ವರ್ಷ ಪೂರೈಸುತ್ತದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಿನ್ನಡೆ ಬಗ್ಗೆ ರಾಜಕೀಯ ವಿಶ್ಲೇಷಣೆ ಮಾಡಿಲ್ಲ. ಆಗಸ್ಟ್ ಮೊದಲ ವಾರದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ಯಕ್ಕೆ ಭೇಟಿ ನೀಡಿಲಿದ್ದಾರೆ. ಈ ವೇಳೆ ಸಂಪೂರ್ಣ ವಿಶ್ಲೇಷಣೆ ಮಾಡುತ್ತೇವೆ ಎಂದು ತಿಳಿಸಿದರು.
 

Trending News