ಮೈಸೂರು: ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಬಡವರಿಗೆ ಸ್ವಾಭಿಮಾನವಿರಲೇಬೇಕು. ನಮ್ಮಲ್ಲಿ ಸ್ವಾಭಿಮಾನವಿದ್ದರೆ ಮಾತ್ರ ಮನುಷ್ಯರಾಗಿ ಬಾಳಲು ಸಾಧ್ಯ, ಇಲ್ಲದಿದ್ದರೆ ಗುಲಾಮಗಿರಿಗೆ ಗುರಿಯಾಗಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್‌ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿತ್ತು. ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ನಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ.ಮೊದಲು ಜನತಾ ದಳ ಪಕ್ಷದಿಂದ ಶ್ರೀನಿವಾಸ್ ಪ್ರಸಾದ್ ರವರು ಲೋಕಸಭೆ ಹಾಗೂ ನಂತರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ ಶ್ರೀನಿವಾಸ್ ಪ್ರಸಾದ್ ಹಾಗೂ ನಾನು ಬೇರೆ ಪಕ್ಷಗಳಲ್ಲಿದ್ದರೂ ನಮ್ಮಲ್ಲಿ ಪರಸ್ಪರ ಸ್ನೇಹ ಹಾಗೂ ಗೌರವಗಳಿದ್ದವು. ಅವರು ವಿವಿಧ ಪಕ್ಷಗಳಲ್ಲಿ ಹಲವು ನಾಯಕರೊಂದಿಗೆ ಒಡನಾಟವನ್ನು ಹೊಂದಿದ್ದರು. ಮನುಷ್ಯತ್ವದಿಂದ ಕೂಡಿದ ಸಜ್ಜನರು. ಅವರು ಯಾವುದೇ ಪಕ್ಷದಲ್ಲಿದ್ದರೂ, ಡಾ. ಅಂಬೇಡ್ಕರ್ ರವರ ವಿಚಾರಧಾರೆಗಳ ನೈಜ ಅನುಯಾಯಿಯಾಗಿದ್ದರು ಎಂದು ಅವರು ನುಡಿ ನಮನ ಸಲ್ಲಿಸಿದರು.
ಇದನ್ನು ಓದಿ : ನಿಮ್ಮ ಮನೆಯಲ್ಲಿ ನೊಣಗಳ ಕಾಟ ಹೆಚ್ಚಾಗಿದೆಯೇ..? ಹಾಗಿದ್ರೆ ತಕ್ಷಣ ಈ ಕೆಲಸ ಮಾಡಿ
ಅವಕಾಶ ವಂಚಿತರಿಗೆ ಜಾತ್ಯತೀತವಾಗಿ ಸಮಾನ ಅವಕಾಶವನ್ನು ನೀಡಬೇಕೆಂಬುದನ್ನು ಬಲವಾಗಿ ನಂಬಿ, ಸಂವಿಧಾನದ ಆಶಯಗಳನ್ನು ಪಾಲಿಸಿಕೊಂಡು ಬಂದಿದ್ದರು. ಬುದ್ಧ, ಬಸವಣ್ಣ, ಗಾಂಧೀಜಿಯವರ ವಿಚಾರಧಾರೆಗಳನ್ನು ನಂಬಿ ನಡೆಯುವವರು ಬದುಕಿನುದ್ದಕ್ಕೂ ಮನುಷ್ಯತ್ವವನ್ನು ಪಾಲಿಸುವವರಾಗಿರುತ್ತಾರೆ. ಮನುಷ್ಯ ಮನುಷ್ಯನನ್ನು ಪರಸ್ಪರ ಗೌರವಿಸಬೇಕೇ ಹೊರತು ದ್ವೇಷಿಸಬಾರದು. ರಾಜಕೀಯ ವೈರುಧ್ಯಗಳಿಂದಾಗಿ ಪರಸ್ಪರ ಟೀಕಿಸುವುದು ಸ್ವಾಭಾವಿಕವಾಗಿದ್ದರೂ, ನಮ್ಮ ಸ್ನೇಹಕ್ಕೆಂದೂ ಧಕ್ಕೆ ಬಂದಿಲ್ಲ ಎಂದು ಅವರು ಸ್ಮರಿಸಿದರು.
ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ನನ್ನ ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು ಎಂದು ಅವರು ಇದೆ ವೇಳೆ ನೆನಪಿಸಿಕೊಂಡರು.
ಇದನ್ನು ಓದಿ : ಟಿ20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕನಾಗಿ ಈತ ಆಡಲಿ: ಸೌರವ್ ಗಂಗೂಲಿ
ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ. ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಿದವರು. ಹಳೆಯ ತಲೆಮಾರಿನ ಈ ರಾಜಕೀಯ ಮುತ್ಸದ್ದಿಯ ನಿಧನದಿಂದ ಬಹುದೊಡ್ಡ ರಾಜಕೀಯ ಕೊಂಡಿ ಕಳಚಿದಂತಾಗಿದೆ. ಅವರ ವಿಚಾರಧಾರೆಗಳು ಇಂದಿನ ಯುವಜನರಿಗೆ ಆದರ್ಶವಾಗಲಿ ಎಂಬ ಹಾರೈಕೆ ನನ್ನದು ಎಂದು ಅವರು ನುಡಿ ನಮನ ಸಲ್ಲಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.